ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲ್ಪೆ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕ ಸಜೀವ ದಹನ

By Staff
|
Google Oneindia Kannada News

Malpe Shipyard
ಮಲ್ಪೆ(ಉಡುಪಿ), ಡಿ. 23 : ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಗೆ ಒಬ್ಬ ಕಾರ್ಮಿಕ ಸಜೀವ ದಹನವಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ದಾರುಣ ಘಟನೆ ಇಲ್ಲಿಗೆ ಸಮೀಪದ ಮಲ್ಪೆಯ ಟೆಬ್ಮಾ ಶಿಪ್ ಯಾರ್ಡ್ ನಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಇದರಿಂದ ರೊಚ್ಚಿಗೆದ್ದ ಉಳಿದ ಕಾರ್ಮಿಕರು ಶಿಪ್ ಯಾರ್ಡ್ ನ ಪಿಠೋಪಕರಣಗಳನ್ನು ಧ್ವಂಸ ಮಾಡಿ ಪ್ರತಿಭಟನೆ ಆರಂಭಿಸಿದ್ದರಿಂದ ಉದ್ರಿಕ್ತ ವಾತಾವರಣ ಉಂಟಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ನಡೆದಿದೆ.

ಘಟನೆ ಸಂಬಂಧಿಸಿದಂತೆ ವಿವರಣೆ ನೀಡಿದ ವಲಯದ ಪೊಲೀಸ್ ಆಯುಕ್ತ ಗೋಪಾಲ್ ಹೊಸೂರು, ಟೆಬ್ಮಾ ಶಿಪ್ ಯಾರ್ಡ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಮೂವರಿಗೆ ಗಾಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಇನ್ನುಳಿದ ಕಾರ್ಮಿಕರ ಆಕ್ರೋಶ ಕಾರಣವಾಗಿದ್ದು, ಆಗ ಉದ್ರಿಕ್ತರ ಗುಂಪು ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸಕ್ಕೆ ಮುಂದಾದರು. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಪರಿಸ್ಥಿತಿಯನ್ನು ಪೊಲೀಸರು ಹತೋಟಿಯಲ್ಲಿದ್ದು, ವಾತಾವರಣ ತಿಳಿಗೊಳಿಸಲಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X