ತೇಜಸ್ವಿನಿಗೆ ಶೋಕಾಸ್ ನೋಟಿಸ್ ಜಾರಿ
ಬೆಂಗಳೂರು,
ಡಿ. 23 : ವಿಧಾನಪರಿಷತ್ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ಅವರು ರಾಜೀರಾಮೆ ನೀಡಬೇಕು ಎಂದು ಆಗ್ರಹಿಸಿದ್ದ ಮಾಜಿ ಸಂಸದೆ ತೇಜಸ್ವಿನಿ ಅವರಿಗೆ ಕೆಪಿಸಿಸಿ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. id="toptextpromo">ಕೆಪಿಸಿಸಿ
ಶಿಸ್ತು ಸಮಿತಿ ಅಧ್ಯಕ್ಷರಾದ ಎಚ್ ಹನುಮಂತಪ್ಪ ಅವರು ಈ ಸಂಬಂಧ ತೇಜಸ್ವಿನಿ ಅವರಿಗೆ ನೋಟಿಸ್ ಜಾರಿ ಮಾಡಿ ವಾರದೊಳಗೆ ಉತ್ತರಿಸದೇ ಇದ್ದರೆ ತಮ್ಮ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಎಐಸಿಸಿಗೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಮೇಲ್ಮನೆ ಫಲಿತಾಂಶ ಪ್ರಕಟವಾದ ನಂತರ ಖಾಸಗಿ ವಾಹಿನಿಯ ಚರ್ಚೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿನಿ, ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ರಾಜೀನಾಮೆಗೆ ಆಗ್ರಹಿಸಿದ್ದರು. id='are-slot-1' class='oiad oi-axt oiadv'> id='top-searched-articles'>ಇದನ್ನು
ಗಂಭೀರವಾಗಿ ಪರಿಗಣಿಸಿರುವ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಈ ಮಧ್ಯೆ ಕೆಪಿಸಿಸಿ ವಕ್ತಾರರನ್ನು ಹೊರತುಪಡಿಸಿ ಸುದ್ದಿ ವಾಹಿನಿಗಳು ನಡೆಸುವ ಸಂವಾದ ಅಥವಾ ಚರ್ಚೆಯಲ್ಲಿ ಭಾಗವಹಿಸುವಂತಿಲ್ಲ ಎಂದು ಸೂಚಿಸಲಾಗಿದೆ.











Click it and Unblock the Notifications