ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್ ನಂತರ ಸಚಿವ ಸಂಪುಟ ಪುನಾರಚನೆ

By Staff
|
Google Oneindia Kannada News

Total revamp of cabinet after March next: BSY
ನವದೆಹಲಿ, ಡಿ.26: ರಾಜ್ಯದ ಬಿಜೆಪಿ ಸರಕಾರ ಎರಡು ವರ್ಷಗಳ ಆಡಳಿತ ಪೂರೈಸುವವರೆಗೆ ಕ(2010ರ ಮೇ) ಸಂಪುಟ ಪುನಾರಚನೆಯ ಪ್ರಶ್ನೆಯೇ ಇಲ್ಲ ಎಂದು ಮುಖಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಯಡಿಯೂರಪ್ಪ, ತಮ್ಮ ಸರಕಾರ ಐದು ವರ್ಷಗಳ ಕಾಲ ರಾಜ್ಯದಲ್ಲಿ ಸುಭದ್ರ ಆಡಳಿತ ನಡೆಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮಂತ್ರಿ ಮಂಡಲದಲ್ಲಿ ಅರ್ಹರು ಮತ್ತು ಸಮರ್ಥರಿಗೆ ಆದ್ಯತೆ ನೀಡಲಾಗುತ್ತದೆ. ಪಕ್ಷದ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದರು.

ಮುಂದಿನ ವರ್ಷ ಬಿಜೆಪಿ ಸರಕಾರ ಎರಡು ವರ್ಷಗಳ ಅಧಿಕಾರ ಪೂರೈಸಲಿದ್ದು, ಆ ಸಂದರ್ಭದಲ್ಲಿ ಮಂತ್ರಿ ಮಂಡಲ ಪುನಾರಚನೆ ಆಗಲಿದ್ದ್ದು ಕೆಲ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂದು ಯಡಿಯೂರಪ್ಪ ತಿಳಿಸಿದರು. ರಾಜ್ಯದ ಮುಂದಿನ ಸಾಲಿನ ಮುಂಗಡ ಪತ್ರ ಸಿದ್ಧಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತವಾಗಿದೆ ಎಂದು ಅವರು ತಿಳಿಸಿದರು.

ಬ್ಲ್ಯಾಕ್ ಮೇಲ್ ಗೆ ಮಣಿದು ರೇಣುಕಾಚಾರ್ಯ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ರಾಜಕೀಯದಲ್ಲಿ ಯಾವಾಗಲೂ ನಮ್ಮ ಇಚ್ಛೆಯಂತೆ ನಡೆಯುವುದಿಲ್ಲ ಎಂದು ಮಾರ್ಮಿಕ ಉತ್ತರ ನೀಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X