ಆಂಧ್ರ ನೂತನ ರಾಜ್ಯಪಾಲರಾಗಿ ನರಸಿಂಹನ್
ಹೈದರಾಬಾದ್,
ಡಿ. 28 : ಕೇಂದ್ರ ಗುಪ್ತದಳ ಇಲಾಖೆ ಮಾಜಿ ಮುಖ್ಯಸ್ಥ ಹಾಗೂ ಪ್ರಸ್ತುತ ಜಾರ್ಖಂಡ್ ರಾಜ್ಯಪಾಲ ಇಎಸ್ಎಲ್ ನರಸಿಂಹನ್ ಅವರಿಗೆ ಆಂಧ್ರಪ್ರದೇಶದ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿದೆ. ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಡಿ ತಿವಾರಿ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿ ಹಿನ್ನೆಲೆಯಲ್ಲಿ ಆ ಸ್ಥಾನ ಖಾಲಿಯಾಗಿತ್ತು. id="toptextpromo">ಆಂಧ್ರಪ್ರದೇಶ
ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎ ಆರ್ ದೇವ್ ಅವರು ನರಸಿಂಹನ್ ಅವರಿಗೆ ರಾಜಭವನದಲ್ಲಿ ಪ್ರಮಾಣ ವಚನ ಬೋಧಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಕೆ ರೋಸಯ್ಯ, ಸಂಪುಟದ ಹಿರಿಯ ಸಚಿವರು, ಪ್ರತಿಪಕ್ಷಗಳ ನಾಯಕರು, ಮುಖ್ಯ ಕಾರ್ಯದರ್ಶಿ ರಮಾಕಾಂತ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. id='are-slot-1' class='oiad oi-axt oiadv'> id='top-searched-articles'>ಪ್ರಸ್ತುತ
ಜಾರ್ಖಂಡ್ ರಾಜ್ಯಪಾಲರಾಗಿರುವ ನರಸಿಂಹನ್ ಅವರಿಗೆ ಆಂಧ್ರಪ್ರದೇಶ ರಾಜ್ಯಪಾಲರ ಸ್ಥಾನ ಹೆಚ್ಚುವರಿ ಸ್ಥಾನ ನೀಡಲಾಗಿದೆ. ಲೈಂಗಿಕ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಎನ್ ಡಿ ತಿವಾರಿ ಅವರು ಆರೋಗ್ಯ ಸಮಸ್ಯೆ ನೆಪವೊಡ್ಡಿ ರಾಜ್ಯಪಾಲ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ್ದರು.











Click it and Unblock the Notifications