ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸರಕಾರ ನೈತಿಕವಾಗಿ ದಿವಾಳಿ, ಸಂಸದ ಅನಂತಕುಮಾರ್

By Mrutyunjaya Kalmat
|
Google Oneindia Kannada News

Ananth kumar Hegde
ಬೆಂಗಳೂರು. ಜ. 2: ಹೊಸವರ್ಷದಲ್ಲಿ ಆಡಳಿತವನ್ನು ಸೂಸೂತ್ರವಾಗಿ ನಡೆಸುಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಹೇಳಿಕೆ ನೀಡಿರುವ ಬೆನ್ನಲ್ಲೇ ಕೆನರಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸರಕಾರದ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ಸರಕಾರದ ಇತ್ತೀಚಿನ ವಿದ್ಯಮಾನಗಳ ನೈತಿಕ ದಿವಾಳಿಗೆ ಸಾಕ್ಷಿಯಾಗಿವೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರಕಾರದಲ್ಲಿ ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗುತ್ತಿದೆ. ಪಕ್ಷವನ್ನು ಕಟ್ಟಿ ಬೆಳೆಸಿದ ಶಾಸಕರು, ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ. ಎಲ್ಲಿಂದಲೋ ಬಂದವರಿಗೆ ಮಣೆ ಹಾಕುತ್ತಿರುವುದು ಸರಿಯಲ್ಲ. ವಲಸೆ ಬಂದವರಿಗೆ ಸಚಿವ ಸ್ಥಾನ ನೀಡಿರುವುದು ಪಕ್ಷದ ನೈತಿಕ ದಿವಾಳಿತನಕ್ಕೆ ಸಾಕ್ಷಿ. ಈ ವರ್ತನೆಯೇ ಮುಂದೆ ಪಕ್ಷಕ್ಕೆ ಅಪಾಯ ತರಬಹುದು. ಸರಕಾರವನ್ನು ಭದ್ರಗೊಳಿಸಲು ಹೋಗಿ ಪಕ್ಷವನ್ನು ಅಭದ್ರ ಹಾಗೂ ಅಶಿಸ್ತಿಗೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಎಂ ಪಿ ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡಿರುವದಕ್ಕೂ ವಿರೋಧಿಸಿದ ಅವರು, ಪಕ್ಷದ ಶಾಸಕರ ಮನವಿ ಹಾಗೂ ಒತ್ತಾಯವನ್ನು ಕಡೆಗಣಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಾದರೂ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುವುದು ಒಳ್ಳೆಯದು ಎಂದು ಅನಂತಕುಮಾರ್ ಹೆಗಡೆ ಅಭಿಪ್ರಾಯಪಟ್ಟರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X