2010ರಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ: ಸಿಎಂ
ಬೆಂಗಳೂರು,
ಡಿ. 2: ಅಡಳಿತದಲ್ಲಿ ಅಮಾಲಾಗ್ರ ಬದಲಾವಣೆ, ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮಗೊಳಿಸುವ ಕಡೆ ಗಮನ, ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅದ್ಯತೆ ಹಾಗೂ ಜನ ಮೆಚ್ಚುವಂತ ಕೆಲಸ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. id="toptextpromo"> ಹೊಸ ವರ್ಷದ ಸಂದರ್ಭದಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಸರಕಾರ ಒತ್ತು ಕೊಡುತ್ತಿದೆ ಎಂಬ ಭಾವನೆಯನ್ನು ಜನರಲ್ಲಿ ಮೂಡಿಸಿಬೇಕಿದೆ ಎಂದರು. ಜಿಲ್ಲಾಧಿಕಾರಿಗಳು ಜೊತೆ ವಿಡಿಯೋ ಕಾನ್ಫೆರೆನ್ಸ್ ನಡೆಸಿ ಸರಕಾರದ ಯೋಜನೆಗಳನ್ನು ಜಾರಿಗೆ ತರಲು ಅಡ್ಡಿ ಏನು, ಬಜೆಟ್ ನಲ್ಲಿ ಘೋಷಿಸಿರುವ ಕಾರ್ಯಕ್ರಮಮಗಳ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ತಿಳಿದುಕೊಳ್ಳುತ್ತೇನೆ ಎಂದು ಹೇಳಿದರು. id='are-slot-1' class='oiad oi-axt oiadv'> id='top-searched-articles'> ಪಕ್ಷದ ಸಂಘಟನೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಮಂಗಳವಾರ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. ಆಡಳಿತ ವ್ಯವಸ್ಥೆ ಬಗ್ಗೆಯೂ ಈ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಪಕ್ಷದ ಶಾಸಕರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ತಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳಬೇಕು. ಅದಕ್ಕೆ ಸಭೆ ವೇದಿಕೆಯಾಗಲಿದೆ. ಸಚಿವರು ಶಾಸಕರಿಗೆ ಹೆಚ್ಚಿನ ಜವಾಬ್ದಾರಿ ವಹಿಸುವ ಬಗ್ಗೆಯೂ ಸಮಾಲೋಚನೆ ನಡೆಯಲಿದೆ ಎಂದು ತಿಳಿಸಿದರು.











Click it and Unblock the Notifications