ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿ 5ರ ವರೆಗೆ ನಗರದಲ್ಲಿ ಪುಸ್ತಕ ಮೇಳ

By Staff
|
Google Oneindia Kannada News

TN Seetharam
ಬೆಂಗಳೂರು, ಜ.3: ಕನ್ನಡ ಪುಸ್ತಕ ಪ್ರಾಧಿಕಾರವು ನಗರದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಹಮ್ಮಿಕೊಂಡಿರುವ ವಿಶೇಷ ರಿಯಾಯಿತಿ ಕನ್ನಡ ಪುಸ್ತಕಗಳ ಮಾರಾಟ ಮೇಳವನ್ನು ಕಿರುತೆರೆಯ ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಪುಸ್ತಕ ಮೇಳವು ಓದುಗರಿಗೆ ಸವಿಯನ್ನು ಉಣಬಡಿಸಲಿ ಎಂದು ಹಾರೈಸಿದರು.ಈ ಪುಸ್ತಕ ಮೇಳವು ಜನವರಿ 5ರ ವರೆಗೆ ನಡೆಯಲಿದ್ದು. ಸರ್ಕಾರಿ ಅಂಗಸಂಸ್ಥೆಗಳ ಪ್ರಕಾಶನಗಳಿಗೆ ಶೇ.50ರಷ್ಟು ಹಾಗೂ ಖಾಸಗಿ ಪ್ರಕಾಶನಗಳಿಗೆ ಶೇ. 25ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ಮಾತನಾಡಿ, ಕನ್ನಡ ಪುಸ್ತಕ ಪ್ರಾಧಿಕಾರವು ಕಳೆದ ಬಾರಿ ಏರ್ಪಡಿಸಿದ ಪುಸ್ತಕ ಮೇಳದ ಯಶಸ್ಸಿನಿಂದ ಪ್ರೇರಿತರಾಗಿ ಓದುಗರಿಗೆ ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ನೀಡುವ ಉದ್ದೇಶದಿಂದ ಈ ಪುಸ್ತಕ ಮೇಳವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಜಿ. ಸಿದ್ದಲಿಂಗಯ್ಯ ಅವರು ಮಾತನಾಡಿ, ರಾಜ್ಯದ ಆಯ್ದ 70 ಪ್ರಕಾಶಕರು ಈ ಪುಸ್ತಕ ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಕಳೆದ ಬಾರಿ ಪುಸ್ತಕ ಮೇಳದಲ್ಲಿ ಸುಮಾರು 80 ಲಕ್ಷ ರೂಪಾಯಿ ವಹಿವಾಟು ನಡೆದಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ವಹಿವಾಟು ನಡೆಯುವ ನಿರೀಕ್ಷೆಯಿದೆ ಎಂದು ತಿಳಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಮನು ಬಳಿಗಾರ, ಕುವೆಂಪು ಭಾಷಾ ಭಾರತಿಯ ಅಧ್ಯಕ್ಷ ಡಾ. ಪ್ರಧಾನ್ ಗುರುದತ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X