ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವನ್ಯಜೀವಿ ಪರ ಅನಿಲ್ ಕುಂಬ್ಳೆ ಬೌಲಿಂಗ್

By Staff
|
Google Oneindia Kannada News

Anil Kumble, wildlife board vice-president
ಮೈಸೂರು, ಜ. 4 : ಗಣಿಗಾರಿಕೆಯಿಂದ ಅರಣ್ಯ ಪ್ರದೇಶದ ಮೇಲೆ ಆಗುತ್ತಿರುವ ಪರಿಣಾಮದ ಕುರಿತು ಸರಕಾರದ ಗಮನ ಸೆಳೆಯುತ್ತೇನೆ ಎಂದು ರಾಜ್ಯ ವನ್ಯಜೀವಿ ಮಂಡಳಿ ಉಪಾಧ್ಯಕ್ಷ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಹೇಳಿದ್ದಾರೆ.

ಮೈಸೂರು ಮೃಗಾಲಯದ ಯುವಸಂಘಟನೆ ಸಮಾರೋಪ ಸಮಾರಂಭಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆಯಿಂದ ಅರಣ್ಯ ಪ್ರದೇಶಕ್ಕೆ ಹಾನಿಯಾಗುತ್ತಿದೆ ಎಂಬುದು ಅರಿವಾಗಿದೆ. ಈ ಸಂಬಂಧ ಮಂಡಳಿ ನೀಡುವ ವರದಿಯಲ್ಲಿ ಇದನ್ನು ಉಲ್ಲೇಖಿಸಲಾಗುವುದು ಎಂದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ವನ್ಯಸಂಪತ್ತು ಉತ್ತಮ ಸ್ಥಿತಿಯಲ್ಲಿದೆ. ಇದನ್ನು ಉಳಿಸಿಕೊಂಡು ಹೋಗುವುದು ಪ್ರತಿಯೊಬ್ಬರ ಮೇಲಿರುವ ಜವಾಬ್ದಾರಿ. ಈ ನಿಟ್ಟಿನಲ್ಲಿ ಸರಕಾರದ ಸಹಕಾರದೊಂದಿಗೆ ವನ್ಯಸಂಪತ್ತು ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕುಂಬ್ಳೆ ಹೇಳಿದರು.

ವನ್ಯಜೀವಿಗಳ ಬಗ್ಗೆ ಪ್ರೀತಿ ಇರುವ ಸಾಕಷ್ಟು ಕ್ರಿಕೆಟಿಗರು ಇದ್ದಾರೆ. ಸಮಾನ ಮನಸ್ಕರನ್ನು ಒಂದೇ ವೇದಿಕೆಗೆ ತಂದು ವನ್ಯಜೀವಿ ಸಂರಕ್ಷಣೆಗೆ ತೊಡಗಿಸಿಕೊಳ್ಳುವ ಯೋಜನೆಯೂ ಇದೆ ಎಂದರು. ವಾರದ ಹಿಂದೆಯಷ್ಟೇ ಮೃಗಾಲಯಕ್ಕೆ ಆಗಮಿಸಿರುವ ಜಿರಾಫೆ ಮರಿಯನ್ನು ಕುಂಬ್ಳೆ ದತ್ತು ಪಡೆದರು. 10 ದಿನದ ಈ ಮರಿಗೆ ಲಕ್ಷ್ಮಿ ಎಂದು ನಾಮಕರಣ ಮಾಡಿದ ಕುಂಬ್ಳೆ 25 ಸಾವಿರ ದತ್ತು ಹಣ ನೀಡಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X