Get Updates
Get notified of breaking news, exclusive insights, and must-see stories!

ಐಎಎಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ

DK Rangaswamy
ಬೆಂಗಳೂರು, ಜ. 7 : ಜಮೀನು ಮಾಲೀಕತ್ವ ವರ್ಗಾವಣೆಗೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ ಡಿ ಕೆ ರಂಗಸ್ವಾಮಿ ವಿಧವೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವನ್ನು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಬಯಲಿಗೆಳೆದಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಸಮಗ್ರ ತನಿಖೆಗೆ ಆದೇಶ ನೀಡಿದೆ.

ಸರಕಾರದ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರು ತನಿಖೆಗೆ ಶೀಘ್ರದಲ್ಲೇ ಅಧಿಕಾರಿಗಳನ್ನು ನೇಮಕ ಮಾಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಐಎಎಸ್ ಅಧಿಕಾರಿ ಸಮೂಹ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ಡಿ ಕೆ ರಂಗಸ್ವಾಮಿ ಅವರು ವಿಧವೆಯೊಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಕುರಿತು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದರು.

ಮಹಿಳೆಗೆ ಲೈಂಗಿಕ ಕಿರಕುಳ ನೀಡಿದ ಐಎಎಸ್ ಅಧಿಕಾರಿ ಡಿ ಕೆ ರಂಗಸ್ವಾಮಿ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಆರೋಪಿ ಅಧಿಕಾರಿ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದು, ಅರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎರಡು ವರ್ಷದ ಹಿಂದೆಯೇ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ವ್ಯಕ್ತಿಗೆ ಯಾವುದೇ ಶಿಕ್ಷೆ ನೀಡದೆ ಬೇರೆ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಲೋಕಾಯುಕ್ತರು ಟೀಕಿಸಿದ್ದರು.

ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ವರದಿ ಬಂದ ಕೂಡಲೇ ಆ ಅಧಿಕಾರಿ ವಿರುದ್ದ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಡಿ ಕೆ ರಂಗಸ್ವಾಮಿ ಅವರ ರಾಮನಗರದ ಜಿಲ್ಲಾಧಿಕಾರಿಯಾಗಿದ್ದಾಗ ಜಮೀನಿ ವರ್ಗಾವಣೆಗೆ ಸಂಬಂಧಿಸಿದಂತೆ ವಿಧವೆ ಆರ್ ಯಾಮಿನಿ ಎಂಬುವವರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಇದನ್ನು ಪ್ರತಿಭಟಿಸಿದ್ದ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು.

ದೇಶದ ಪ್ರಸ್ತುತ ಪ್ರಮುಖ ಸುದ್ದಿಗಳಲ್ಲಿ ಲೈಂಗಿಕ ಪ್ರಕರಣಗಳದ್ದೆ ದೊಡ್ಡ ಹಾವಳಿಯಾಗಿದೆ. ಅಪ್ರಾಪ್ತೆ ಟೆನ್ನಿಸ್ ಆಟಗಾರ್ತಿಯಾಗಿದ್ದ ರುಚಿಕಾ ಗಿರ್ಹೋತ್ರಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನ ನಿವೃತ್ತ ಜಂಟಿ ನಿರ್ದೇಶಕ ಎಸ್ ಪಿಎಸ್ ರಾಥೋರ್ ಅವರ ಕಾಮಕಾಂಡ, ಆಂಧ್ರಪ್ರದೇಶದ ರಾಜ್ಯಪಾಲರಾಗಿದ್ದ 85ರ ಹರೆಯ ಎನ್ ಡಿ ತಿವಾರಿ ಅವರ ರಸಿಕತನ, ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ನಿವೃತ್ತಿ ಐಪಿಎಸ್ ಕೆಪಿಎಸ್ ಗಿಲ್ ಹಾಗೂ ಕರ್ನಾಟಕದ ಅಬಕಾರಿ ಸಚಿವ ಎಂ ಪಿ ರೇಣುಕಾಚಾರ್ಯ ಅವರ ನರ್ಸ್ ಜಯಲಕ್ಷ್ಮಿ ಪ್ರಕರಣ ಜೊತೆಗೆ ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಡಿ ಕೆ ರಂಗಸ್ವಾಮಿ ಸೇರ್ಪಡೆಯಾಗಿದ್ದಾರೆ. ಆದರೆ, ಸಚಿವ ರೇಣುಕಾಚಾರ್ಯ ಅವರ ಮೇಲೆ ತನಿಖೆ ನಡೆಸದ ಸಿಎಂ ಅಧಿಕಾರಿಯೊಬ್ಬರ ಮೇಲಿರುವ ಆರೋಪವನ್ನು ತನಿಖೆಗೆ ವಹಿಸಿರುವುದು ಪ್ರಶ್ನಿಸುವ ವಿಷಯವೇ...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+