• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ

By Staff
|

ಜಮ್ಮು, ಜ.9: ಭಾರತ ಮತ್ತು ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ತೀವ್ರ ಗುಂಡಿನ ಚಕಮಕಿ ನಡೆಸುವ ಮೂಲಕ ಕದನ ವಿರಾಮವನ್ನು ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಪರಗವಾಲ್ ಬಳಿ ಪಾಕಿಸ್ತಾನ ಈ ದುಷ್ಕೃತ್ಯವನ್ನು ನಡೆಸಿ ಮತ್ತೊಮ್ಮೆ ಭಾರತದಕೆಂಗಣ್ಣಿಗೆ ಗುರಿಯಾಗಿದೆ.

ಶನಿವಾರ ಮುಂಜಾನೆ 4 ಗಂಟೆಯ ಸಮಯದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ತತ್ ಕ್ಷಣವೆ ಗಡಿ ಭದ್ರತಾ ಪಡೆ (ಬಿಎಸ್ ಎಫ್) ಹಾಗೂ ಸೈನ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದರು ಎಂದು ಭಾರತೀಯ ಸೈನಿಕಾಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿಯ ನೀಡಿದ್ದಾರೆ.

ಭಾರತದ ಗಡಿಯೊಳಗೆ ನುಸುಳುವ ಪಾಕಿಸ್ತಾನದ ಪ್ರಯತ್ನಕ್ಕೆ ತಕ್ಕ ಉತ್ತರ ನೀಡಿದ್ದೇವೆ ಎಂದು ಬಿಎಸ್ ಎಫ್ ನ ಡಿಐಜಿ ತಿಳಿಸಿದ್ದಾರೆ. ಜಮ್ಮು ಅಂಕ್ನೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಗಿ ಭದ್ರತೆ ಘೋಷಿಸಲಾಗಿದೆ. ಏತನ್ಮಧ್ಯೆ ಪಂಜಾಬ್ ನ ಅಮೃತಸರ್ ಜಿಲ್ಲೆಯ ಮೇಲೆ ಉಗ್ರರು ರಾಕೆಟ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X