ಇನ್ನೊಂದು ಹನಿ ಸಂಜೀವಿನಿ

Another drop of pulse polio please
ಬೆಂಗಳೂರು,ಜ.11 :ಐದು ವರ್ಷ ವಯೋಮಿತಿ ಒಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಕರ್ನಾಟಕವನ್ನು ಪೋಲಿಯೊ ಮುಕ್ತ ರಾಜ್ಯವನ್ನಾಗಿಸುವಲ್ಲಿ ಪೋಷಕರು ಸಹಕರಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ.

ರೇಸ್‌ಕೋರ್ಸ್ ರಸ್ತೆಯಲ್ಲಿನ ತಮ್ಮ ನಿವಾಸದಲ್ಲಿ ಭಾನುವಾರ ಬೆಳಿಗ್ಗೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಪೋಲಿಯೋ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಅವರು ಅಂಗವಿಕಲತೆಯೊಂದಿಗೆ ಭೀಕರಪರಿಣಾಮಗಳನ್ನು ಬೀರಬಹುದಾದ ಈ ಮಾರಕ ರೋಗವನ್ನು ತಡೆಗಟ್ಟಲು ಪೋಲಿಯೊ ಲಸಿಕೆಯನ್ನು ಮಕ್ಕಳಿಗೆ ಹಾಕಿಸಬೇಕಾಗಿದೆ, ಭಾರತವನ್ನು ಪೋಲಿಯೊ ಮುಕ್ತವನ್ನಾಗಿಸಲು 1994 ರಲ್ಲಿ ಪ್ರಾರಂಭವಾದ ಈ ಪಲ್ಸ್ ಪೋಲಿಯೊ ಯೋಜನೆಯಿಂದಾಗಿ ದೇಶದಲ್ಲಿ ಸಾಕಷ್ಟು ಪ್ರಗತಿ ಕಂಡು ಬಂದಿದೆ ಎಂದು ಅವರ ಹೇಳಿದರು.

ರಾಜ್ಯದಲ್ಲಿ ಈ ವರ್ಷ ಐದು ವರ್ಷ ವಯೋಮಿತಿಯೊಳಗಿನ ಸುಮಾರು 73.18 ಲಕ್ಷ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿಯೊಂದಲಾಗಿದ್ದು ಈ ಕಾರ್ಯಕ್ರಮಕ್ಕಾಗಿ ಆರೋಗ್ಯ ಇಲಾಖೆ ಸರ್ವಸನ್ನದ್ಧವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದ ಮುಖ್ಯಮಂತ್ರಿ ಅವರು ನಗರದಲ್ಲಿ ಆಸ್ಪತ್ರೆಗಳು, ಶಾಲೆ, ಬಸ್ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಪೋಲಿಯೊ ಲಸಿಕೆ ಹಾಕುವ ಕೇಂದ್ರಗಳನ್ನು ತೆರೆಯಲಾಗಿದೆ.

ಆದ್ದರಿಂದ ಎಲ್ಲಾ ತಂದೆ ತಾಯಂದಿರು ತಮ್ಮ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಈ ಹಿಂದೆ ಎಷ್ಟೇಬಾರಿ ಪೋಲಿಯೊ ಲಸಿಕೆ ಹಾಕಿಸಿದ್ದರೂ ಮತ್ತೊಮ್ಮೆ ಪೋಲಿಯೊ ಹನಿ ಹಾಕಿಸುವ ಮೂಲಕ ದೇಶವನ್ನು ಪೋಲಿಯೊ ಮುಕ್ತ ರಾಷ್ಟ್ರವಾಗಿಸುವಲ್ಲಿ ಸಹಕರಿಸಬೇಕು ಎಂದರು.
ಆರೋಗ್ಯ ಇಲಾಖೆಯ ಕಾರ್ಯದರ್ಶಿ ಡಾ.ರಮಣರೆಡ್ಡಿ ಇಲಾಖಾ ಆಯುಕ್ತರಾದ ಶ್ರೀ ನಾಯಕ್, ಅಭಿಯಾನ ನಿರ್ದೇಶಕರಾದ ಸೆಲ್ವಕುಮಾರ್ ಆರೋಗ್ಯ ಇಲಾಖೆ ಅಧಿಕಾರಿಗಳು ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+