ಬಿಜೆಪಿ ನಾಯಕರೇ ಪ್ರತಿಭಟನೆ ನಿಲ್ಲಿಸಿ, ಎಚ್ಡಿಕೆ
ಬೆಂಗಳೂರು,
ಜ. 11 : ದೇವೇಗೌಡರ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯಿಂದ ರಾಜ್ಯದಲ್ಲಿ ಅಶಾಂತಿ ಮನೆಮಾಡಿದೆ. ಇದನ್ನು ಕೂಡಲೇ ನಿಲ್ಲಿಸದಿದ್ದರೆ ನಾವು ಕೂಡಾ ನಮ್ಮ ಕಾರ್ಯಕರ್ತ ಪ್ರತಿಯಾಗಿ ಪ್ರತಿಭಟಿಸಲು ಕರೆ ನೀಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಇನ್ನೊಂದಡೆ ಅರಸೀಕೆರೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಜೆಡಿಎಸ್ ಕಾರ್ಯಕರ್ತರು ಚಪ್ಪಲಿ ಎಸಗಿರುವ ಬಗ್ಗೆ ವರದಿಯಾಗಿದೆ. ಅರಸೀಕೆರೆಯಲ್ಲಿ ಪರಿಸ್ಥಿತಿ ಸಂಪೂರ್ಣ ಉದ್ವಿಗ್ನಗೊಂಡಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. id="toptextpromo">ಮುಖ್ಯಮಂತ್ರಿ
ಯಡಿಯೂರಪ್ಪ ವಿರುದ್ಧ ಮಾಜಿ ಎಚ್ ಡಿ ದೇವೇಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದರು. ಇದನ್ನು ಪ್ರತಿಭಟಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ದೇವೇಗೌಡರ ಪ್ರತಿಕೃತಿ ದಹಿಸಿ ಧಿಕ್ಕಾರ ಘೋಷಣೆಗಳು ನಡೆಸುತ್ತಿದ್ದಾರೆ. ಬೀದರ್ ನಲ್ಲಿ ಜೆಡಿಎಸ್ ಕಚೇರಿಗೆ ನುಗ್ಗಿ ದಾಳಿ ನಡೆಸಿರುವ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಘೋಷಣೆ ಕೂಗಿದ್ದಾರೆ. ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿದೆ. id='are-slot-1' class='oiad oi-axt oiadv'> id='top-searched-articles'>ಮುಂಬರುವ
ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ 198 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.











Click it and Unblock the Notifications