ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಠ ಹಿಡಿದರೆ ಕಠಿಣ ಕ್ರಮ, ಹಾಕಿ ಇಂಡಿಯಾ

|
Google Oneindia Kannada News

AK Mattoo
ಪುಣೆ, ಜ. 11 : ಬಾಕಿ ಹಣ ನೀಡುವಂತೆ ಒತ್ತಾಯಿಸಿ ಆಟಗಾರರು ಅಭ್ಯಾಸ ಪಂದ್ಯವನ್ನು ಬಹಿಷ್ಕರಿಸುವುದು ಸರಿಯಲ್ಲ. ಅಭ್ಯಾಸ ಪಂದ್ಯಕ್ಕೆ ಹಾಜರಾಗದಿದ್ದಲ್ಲಿ ಆಟಗಾರರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಾಕಿ ಇಂಡಿಯಾ ಸ್ಪಷ್ಟ ಸಂದೇಶ ರವಾನಿಸಿದೆ.

ವಿಡಿಯೋ:ವೇತನ ವಿಳಂಬ, ಹಾಕಿ ಆಟಗಾರರ ಪ್ರತಿಭಟನೆ

ಮುಂದಿನ ತಿಂಗಳು ನವದೆಹಲಿಯಲ್ಲಿ ಹಾಕಿ ವಿಶ್ವಕಪ್ ನಡೆಯಬೇಕಿದೆ. ಅದರ ಪೂರ್ವ ತಯಾರಿಗಾಗಿ ಪುಣೆಯಲ್ಲಿ ಅಭ್ಯಾಸ ಪಂದ್ಯಗಳನ್ನು ಏರ್ಪಡಿಸಲಾಗಿದೆ. ಸಂಬಳ ನೀಡಿಲ್ಲ ಎನ್ನುವು ಕಾರಣಕ್ಕೆ ಅಭ್ಯಾಸ ಪಂದ್ಯವನ್ನು ಬಹಿಷ್ಕರಿಸುವುದು ಏಷ್ಟು ಸರಿ ? ಸಮಸ್ಯೆಗಳಿದ್ದರೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ಪಂದ್ಯ ಬಹಿಷ್ಕರಿಸಿದರೆ ಹೇಗೆ ಎಂದು ಹಾಕಿ ಇಂಡಿಯಾದ ಅಧ್ಯಕ್ಷ ಎ ಕೆ ಮಟ್ಟೂ ಎಚ್ಚರಿಕೆ ನೀಡಿದ್ದಾರೆ.

ಆಟಗಾರರಿಗೆ ಸಂಬಳಕ್ಕೆ ಸಂಬಂಧಿಸಿದಂತೆ ಹಾಕಿ ಇಂಡಿಯಾ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಆದರೂ ಆಟಗಾರರು ಹಠಹಿಡಿದಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಆಟಗಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಟ್ಟೂ ಹೇಳಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X