ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಸ್ತೆ ಸುಧಾರಣೆಗೆ 18,000 ಕೋ ರು

By Staff
|
Google Oneindia Kannada News

SV Ranganath
ಬೆಂಗಳೂರು, ಜ. 11 : ಮುಂಬರುವ ದಿನಗಳಲ್ಲಿ ರಾಜ್ಯದ ರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 18,000 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಹೇಳಿದರು.

ನಗರದಲ್ಲಿ ಏರ್ಪಡಿಸಲಾಗಿದ್ದ ಏಷಿಯನ್ ಅಮೆರಿಕನ್ ಹೋಟೆಲ್ ಮಾಲೀಕರ ಸಂಘದ ನಿಯೋಗದೊಂದಿಗೆ ಮಾತನಾಡುತ್ತಿದ್ದ ಅವರು ಈ ವಿಷಯವನ್ನು ಸ್ಪಷ್ಟಪಡಿಸಿದರು. ಭಾರತದಲ್ಲಿ ಹೋಟೆಲ್ ಸ್ಥಾಪನೆಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಭೇಟಿ ನೀಡಿದ ನಿಯೋಗಕ್ಕೆ ಈ ಭರವಸೆ ನೀಡಿರುವ ರಂಗನಾಥ್, ರಾಜ್ಯದ ರಸ್ತೆಗಳ ಸುಧಾರಣೆಗೆ ಸರಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು. ಶೀಘ್ರದಲ್ಲಿ 18 ಸಾವಿರ ಕೋಟಿ ರುಪಾಯಿಗಳ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು. ರಸ್ತೆ ಸುಧಾರಣೆ ಸಂಬಂಧಿಸಿದಂತೆ ಯೋಜನೆಗಳನ್ನು ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳುವುದಾಗಿಯೂ ಹೇಳಿದರು.

ರಸ್ತೆ ಸುಧಾರಣೆಗೆ ಸಾರಿಗೆ ಸಚಿವ ಆರ್ ಅಶೋಕ್ ಅವರು 22 ಸಾವಿರ ಕೋಟಿ ರುಪಾಯಿಗಳನ್ನು ವಿನಿಯೋಗಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಸರಕಾರ ಅಭಿವೃದ್ಧಿ ಪರ ಇರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಲು ಅನೇಕ ವಿದೇಶಿ ಕಂಪನಿಗಳು ಮುಂದೆ ಬಂದಿವೆ. ಈವರೆಗೆ ಸುಮಾರು 30 ಸಾವಿರ ಕೋಟಿ ರುಪಾಯಿ ಬಂಡವಾಳ ಹರಿದು ಬಂದಿವೆ. ಇನ್ನು ಅನೇಕ ಕಂಪನಿಗಳು ಬಂಡವಾಳ ಹೂಡಲು ಮುಂದೆ ಬಂದಿವೆ ಎಂದು ರಂಗನಾಥ್ ಹೇಳಿದರು.

ಮುಂಬರುವ ದಿನಗಳಲ್ಲಿ ಬೆಂಗಳೂರಿನ ಮೂಲಭೂತ ಸೌಕರ್ಯಗಳು, ಟ್ರಾಫಿಕ್ ಸಮಸ್ಯೆಗೆ ಪರಿಹಾರ ಮತ್ತು ವಿಮಾನ ನಿಲ್ದಾಣ ರಸ್ತೆಯಲ್ಲಿನ ಟ್ರಾಫಿಕ್ ಸಮಸ್ಯೆ ಹೋಗಲಾಡಿಸಲು ಪ್ಲೈಓವರ್ ಗಳನ್ನು ನಿರ್ಮಿಸಲು ಈಗಾಗಲೇ ಅನುಮತಿ ನೀಡಲಾಗಿದೆ. ನಗರದಲ್ಲಿ 11 ಪ್ಲೈಓವರ್ ಗಳು ನಿರ್ಮಾಣ ಮುಂದುವರೆದಿದೆ. ಇದರಲ್ಲಿ 6 ಪ್ಲೈ ಓವರ್ ಗಳು ಅಂತಿಮ ಹಂತಕ್ಕೆ ತಲುಪಿವೆ. ಶೀಘ್ರದಲ್ಲಿ ಅವುಗಳು ಲೋಕಾರ್ಪಣೆಯಾಗಲಿವೆ. ಸಾರಿಗೆ ಇಲಾಖೆಯಿಂದ ರಾಜ್ಯ ರಸ್ತೆ ಸಾರಿಗೆಗೆ ಬಸ್ ನಿಲ್ದಾಣಕ್ಕೆ ನೀಲನಕ್ಷೆ ತಯಾರಿಸಲಾಗಿದ್ದು, ಶೀಘ್ರದಲ್ಲಿ ಆ ಕೆಲಸ ಆರಂಭಗೊಳ್ಳಲಿದೆ ಎಂದು ಮುಖ್ಯ ಕಾರ್ಯದರ್ಶಿಗಳು ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X