ತೆಲಂಗಾಣ, ಮತ್ತೆ ಭುಗಿಲೆದ್ದ ಹಿಂಸಾಚಾರ
ಹೈದರಾಬಾದ್,
ಜ. 20 : ವಿದ್ಯಾರ್ಥಿ ಒಕ್ಕೂಟ ಕರೆ ನೀಡಿರುವ 48 ಗಂಟೆಗಳ ತೆಲಂಗಾಣ ಬಂದ್ ಹಿನ್ನಲೆಯಲ್ಲಿ ರಾಜಧಾನಿ ಹೈದರಾಬಾದ್ ಸೇರಿದಂತೆ ತೆಲಂಗಾಣ ಪ್ರಾಂತ್ಯದ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಒಸ್ಮಾನಿಯಾ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಹೈದರಾಬಾದ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದು, ಗುಂಪು ಚೆದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. id="toptextpromo">ಆಂಧ್ರಪ್ರದೇಶ
ರಸ್ತೆ ಸಾರಿಗೆ ಸಂಸ್ಥೆ ಈ ಪ್ರಾಂತ್ಯದಲ್ಲಿ ತನ್ನ ಸೇವೆಯನ್ನು ರದ್ದುಗೊಳಿಸಿದೆ. ತೆಲಂಗಾಣ ಜಿಲ್ಲೆಗಳಾದ ಮೇಡಕ್, ನಿಜಾಮಾಬಾದ್, ಕರೀಂನಗರ ಮತ್ತು ನೆಲಗೊಂಡ ಜಿಲ್ಲೆಗಳಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್ ಮತ್ತು ಸಿಕಂದರಾಬಾದ್ ನಲ್ಲೂ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. id='are-slot-1' class='oiad oi-axt oiadv'> id='top-searched-articles'>ಪ್ರತ್ಯೇಕ
ತೆಲಂಗಾಣ ರಾಜ್ಯ ಸ್ಥಾಪನೆಗೆ ಕೇಂದ್ರ ಸರಕಾರ ಅನುಸರಿಸುತ್ತಿರುವ ವಿಳಂಬ ನೀತಿಯಿಂದ ಬೇಸತ್ತು ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ನಂತರ ವಿದ್ಯಾರ್ಥಿ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಒಸ್ಮಾನಿಯಾ ವಿಶ್ವವಿದ್ಯಾಲಯದ ಅಂತಿಮ ಎಂಸಿಎ ವಿದ್ಯಾರ್ಥಿ ಮತ್ತು ಪ್ರಥಮ ಬಿಕಾಂ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಇಬ್ಬರ ಶವದ ಸಮೇತ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು ಪೊಲೀಸರು ಈ ಪ್ರದೇಶದಲ್ಲಿ ಭಾರಿ ಬಂದೋಬಸ್ತ್ ಮಾಡಿದ್ದಾರೆ.











Click it and Unblock the Notifications