ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ ಸೋಲು : ಗುಪ್ತಚರ ಇಲಾಖೆ

By Mrutyunjaya Kalmat
|
Google Oneindia Kannada News

BJP may lose in BBMP election
ಬೆಂಗಳೂರು, ಜ. 20 : ಬಿಬಿಎಂಪಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದು ಗುಪ್ತಚರ ಇಲಾಖೆ ಸರಕಾರಕ್ಕೆ ವರದಿ ನೀಡಿದೆ ಎನ್ನಲಾಗಿದೆ. ಈ ವರದಿಯನ್ನೇ ಕುಂಟು ನೆಪ ಮಾಡಿಕೊಂಡು ಚುನಾವಣೆ ಮುಂದೂಡುವ ಪ್ರಯತ್ನವನ್ನು ಬಿಜೆಪಿ ಶಾಸಕರು ಮತ್ತು ಸಚಿವರು ನಡೆಸುತ್ತಿದ್ದು, ಅದಕ್ಕೂ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಿದ್ದರಿಂದ ಬಿಜೆಪಿಗೆ ತೀವ್ರ ನಿರಾಶೆ ಉಂಟು ಮಾಡಿದೆ.

ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಬಿಎಂಪಿಯನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳದಿದ್ದರೆ ಪಕ್ಷ ಹಾಗೂ ಸರಕಾರಕ್ಕೆ ಮುಖಭಂಗ ಖಚಿತ. ಆದುದರಿಂದ ಶತಾಯುಗತಾಯು ಗೆಲ್ಲಲೇಬೇಕೆಂಬ ಒತ್ತಡವನ್ನು ಸಚಿವರು ಮತ್ತು ಶಾಸಕರ ಮೇಲೆ ಹೇರಲಾಗುತ್ತಿದೆ. ಹುಬ್ಬಳ್ಳಿ-ಧಾರವಾಡ, ಬಳ್ಳಾರಿ ಮತ್ತು ಬೆಳಗಾವಿ ಮಹಾನಗರಪಾಲಿಕೆ ಅಧಿಕಾರ ಹಿಡಿದಿರುವ ಬಿಜೆಪಿಗೆ ಬಿಬಿಎಂಪಿ ಪ್ರತಿಷ್ಟೆಯ ಪ್ರಶ್ನೆಯಾಗಿದ್ದು ಅಧಿಕಾರ ಹಿಡಿಯಬೇಕೆಂಬುದು ಪಕ್ಷದ ಏಕೈಕ ಗುರಿ ಎನ್ನಲಾಗಿದೆ.

198ವಾರ್ಡ್ ಗಳ ಪೈಕಿ ಬಿಜೆಪಿ 70 -80 ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ 70 ಸ್ಥಾನ ದಕ್ಕಬಹುದು. ಒಂದು ವೇಳೆ ಹೊಂದಾಣಿಕೆ ಏರ್ಪಡದಿದ್ದರೆ ಬಿಜೆಪಿಗೆ 80 -90 ಸ್ಥಾನ ದಕ್ಕಬಹುದು ಎಂದು ಗುಪ್ತಚರ ದಳ ಮಾಹಿತಿ ನೀಡಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಎಷ್ಟು ಸ್ಥಾನಗಳು ಸಿಗಲಿವೆ ಎನ್ನುವುದು ಸ್ಪಷ್ಟವಾಗಿಲ್ಲ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X