ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸೂರು ರಸ್ತೆ ಫ್ಲೈಓವರ್ ಜ.22ರಿಂದ ಮುಕ್ತ

|
Google Oneindia Kannada News

Bommanahalli Electronic City fly over is ready
ಬೆಂಗಳೂರು, ಜ. 20 : ಸುಮಾರು 800 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಹೊಸೂರುರಸ್ತೆ ಬೊಮ್ಮನಹಳ್ಳಿ-ಇಲೆಕ್ಟ್ರಾನಿಕ್ ಸಿಟಿ ಎಕ್ಸ್ ಪ್ರೆಸ್ ಹೆದ್ದಾರಿ ರಸ್ತೆ ಶುಕ್ರವಾರ (ಜ.22)ರಂದು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ.

ಬೊಮ್ಮನಹಳ್ಳಿಯಿಂದ ಇಲೆಕ್ಟ್ರಾನಿಕ್ ಸಿಟಿ ವರೆಗಿನ 10 ಕಿಮೀ ಉದ್ದದ ನಾಲ್ಕು ಪಥದ ಈ ರಸ್ತೆ 15 ಮೀಟರ್ ಅಗಲವಾಗಿದ್ದು, 2006ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಈ ಎಕ್ಸ್ ಪ್ರೆಸ್ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಿಗದಿತ ಸಮಯಕ್ಕಿಂತ ಒಂದೂವರೆ ವರ್ಷ ತಡವಾಗಿ ಸಿದ್ದವಾಗುತ್ತಿರುವ ಈ ರಸ್ತೆಯನ್ನು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ಕಮಲ್ ನಾಥ್ ಉದ್ಘಾಟಿಸಲಿದ್ದಾರೆ.

ಬೆಂಗಳೂರು ಮಹಾನಗರಪಾಲಿಕೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಹೊರವಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X