ಪಾಲಿಕೆ ಸದಸ್ಯರು ಆಸ್ತಿ ಘೋಷಿಸಲಿ: ಹೆಗ್ಡೆ

Santhosh Hegde
ಬೆಂಗಳೂರು, ಜ. 21 : ರಾಜ್ಯದ ಎಲ್ಲಾ ಏಳು ಮಹಾನಗರ ಪಾಲಿಕೆ ಸದಸ್ಯರು ತಮ್ಮ ಆಸ್ತಿ ವಿವರ ಘೋಷಣೆ ಮಾಡಿಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸರಕಾರ ಲೋಕಾಯುಕ್ತ ಕಾಯ್ದೆಯ 22ನೇ ವಿಧಿಗೆ ತಿದ್ದುಪಡಿ ತರಬೇಕು ಎಂದು ಕೋರಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ರಾಮಮನೋಹರ್ ಲೋಹಿಯಾ ವಿಚಾರಣೆ ವೇದಿಕೆಯು ನಗರದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಮತದಾರರ ಜಾಗೃತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಈ ಹಿಂದೆ ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು ಎಂದು ಸೂಚಿಸಿದಾಗ ಬಲವಾರು ಗಂಭೀರ ಪರಿಗಣಿಸಿರಲಿಲ್ಲ.148 ಮಂದಿ ಆಸ್ತಿ ಘೋಷಣೆ ಮಾಡಿರಲಿಲ್ಲ. ಆದರೆ, ಅಂತವರ ವಿರುದ್ದ ಕ್ರಿಮಿನಲ್ ಕೇಸ್ ಹೂಡುವುದಾಗಿ ಎಚ್ಚರಿಕೆ ನೀಡುತ್ತಿದ್ದಂತೆಯೇ 145 ಮಂದಿ ಆಸ್ತಿ ಘೋಷಣೆ ಮಾಡಿದರು ಎಂದು ಹೆಗ್ಡೆ ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+