ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಗೆ ತಿಪ್ಪಣ್ಣ, ಗುರುದೇವ್ ರಾಜೀನಾಮೆ

By Mrutyunjaya Kalmat
|
Google Oneindia Kannada News

Tippanna, BN Gurudev resigns his MLC post
ಬೆಂಗಳೂರು, ಜ. 21 : ದಿಢೀರ್ ಬೆಳವಣಿಗೆಯಲ್ಲಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಎನ್ ತಿಪ್ಪಣ್ಣ ಮತ್ತು ಬಿ ಎನ್ ಗುರುದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅವರನ್ನು ಭೇಟಿ ಮಾಡಿರುವ ಈ ಇಬ್ಬರು ನಾಯಕರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಗುರುದೇವ್ ಮತ್ತು ತಿಪ್ಪಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಚರ್ಚೆ ನಡೆಸುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗುರುದೇವ್ ಅವರು ಪಕ್ಷ ವಿರೋಧಿ ಚಟುವಟಿಕೆ ಆರೋಪಕ್ಕೆ ಗುರಿಯಾಗಿದ್ದರು. ಆಗಲೇ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕಾರ್ಯಕರ್ತರು ಪಕ್ಷದ ವರಿಷ್ಠ ದೇವೇಗೌಡರನ್ನು ಒತ್ತಾಯಿಸಿದ್ದರು.

ಆದರೆ, ರಾಜಕೀಯ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಗೌಡರು ಗುರುದೇವ್ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಮನಸ್ಸು ಮಾಡಿರಲಿಲ್ಲ. ಪಕ್ಷದಲ್ಲಿ ಅಭಿವೃಕ್ತಿ ಸ್ವಾತಂತ್ಪವಿಲ್ಲ. ಉಸಿರು ಕಟ್ಟುವ ವಾತಾವರಣವಿದೆ. ಜೆಡಿಎಸ್ ಕುಟುಂಬ ರಾಜಕಾರಣ ಪಕ್ಷ ಎಂದು ಅವರು ಆರೋಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಧಾನ ಪರಿಷತ್ ಸ್ಥಾನಕ್ಕೆ ಜೆಡಿಎಸ್ ಸದಸ್ಯರು ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ವಕ್ತಾರ ವೈ ಎಸ್ ವಿ ದತ್ತಾ, ವಿಧಾನ ಪರಿಷತ್ ನಲ್ಲೂ ಬಿಜೆಪಿ ಆಪರೇಶನ್ ಕಮಲದ ಮುಂದುವರೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X