ರಾಜ್ಯದಲ್ಲಿ ಸದ್ಯವೇ ನೂತನ ಜಾಹೀರಾತು ನೀತಿ

ಪ್ರಸಕ್ತ ವರ್ಷದಿಂದ ಮೊಹರೆ ಹನುಮಂತರಾವ್ ಅವರ ಹೆಸರಿನಲ್ಲಿ 1 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡ ರಾಜ್ಯಮಟ್ಟದ ಪ್ರಶಸ್ತಿ ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತರ ಹಾಗೂ ಸಂಕಷ್ಟದಲ್ಲಿರುವ ಪತ್ರಕರ್ತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ರೂಪಿಸಿದೆ ಎಂದು ಅವರು ಹೇಳಿದರು.
ಪತ್ರಕರ್ತರಿಗೆ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಸಂಚರಿಸಲು ಸ್ಮಾರ್ಟ್‌ಕಾರ್ಡ್ ನೀಡುವ ವಿಚಾರ ಪರಿಶೀಲನೆಯಲ್ಲಿದೆ ಎಂದ ಅವರು ಪತ್ರಕರ್ತರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸರ್ಕಾರವನ್ನು ಹೆಚ್ಚು ಅವಲಂಬಿಸುವಂತಾಗಬಾರದು ಎಂದು ಕಿವಿಮಾತು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು. ಜಾಹಿರಾತು ನೀತಿ ಹಾಗೂ ಸಿನಿಮಾ ನೀತಿ, ಕರಡು ಸಿದ್ದವಾಗಿದ್ದು ಸದ್ಯವೇ ಅಂತಿಮಗೊಳಿಸಲಾಗುವುದು ಎಂದರು.
ಟಿ.ಎನ್.ಸತ್ಯನ್ ಹೆಸರಿನಲ್ಲಿ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಹಿಂದೂ ಪತ್ರಿಕೆಯ ಛಾಯಾಗ್ರಾಹಕ ಶ್ರೀರಾಂ ಹಾಗೂ ಕನ್ನಡಪ್ರಭ ಪತ್ರಿಕೆ ವರದಿಗಾರ ಮಹೇಶ್ ಭಗೀರಥ ಅವರಿಗೆ ಪ್ರಧಾನ ಮಾಡಲಾಯಿತು. ಅಭಿವೃದ್ಧಿಶೀಲ ರಾಷ್ಟ್ರದಲ್ಲಿ ಜನಹಿತ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರ ಜವಾಬ್ದಾರಿ ಹೆಚ್ಚು ಇದೆ ಎಂದು ಶಾಸಕ ಶ್ರೀನಿವಾಸಪ್ರಸಾದ್ ಅಭಿಪ್ರಾಯಪಟ್ಟರು. ಸಂಸದ ವಿಶ್ವನಾಥ್, ಆಂದೋಲನ ಪತ್ರಿಕೆ ಸಂಪಾದಕ ರಾಜಶೇಖರಕೋಟಿ, ನಿವೃತ್ತ ಅರಣ್ಯಾಧಿಕಾರಿ ಜಯರಾಮ್, ಸಿದ್ದಾರ್ಥ ಹೋಟೆಲ್ ಮಾಲೀಕ ಶ್ರೀ ಗಿರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೈಸೂರುಮಿತ್ರ ಪತ್ರಿಕೆ ಸಂಪಾದಕ ಕೆ.ಬಿ.ಗಣಪತಿ ಅಧ್ಯಕ್ಷತೆ ವಹಿಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications