ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಸದ್ಯವೇ ನೂತನ ಜಾಹೀರಾತು ನೀತಿ

By Mahesh
|
Google Oneindia Kannada News

Govt to pass new advertisement policy
ಮೈಸೂರು, ಜ.21:ಪ್ರಸಕ್ತ ವರ್ಷ ವಿವಿಧ ಜಿಲ್ಲೆಗಳಲ್ಲಿ ಪತ್ರಕರ್ತರ ಭವನ ನಿರ್ಮಾಣ ಹಾಗೂ ನವೀಕರಣಕ್ಕಾಗಿ 3 ಕೋಟಿ ರೂ. ಕಾದಿರಿಸಿದ್ದು, ಅನುದಾನ ವ್ಯರ್ಥವಾಗದ ಹಾಗೆ ಪತ್ರಕರ್ತರ ಸಂಘಗಳಿಗೆ ಅನುದಾನ ನೀಡಲು ಕ್ರಮ ವಹಿಸಲಾಗಿದೆ ಎಂದು ವಾರ್ತಾ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಿ.ಆರ್.ಜಯರಾಮರಾಜೇಅರಸು ಹೇಳಿದರು.

ಪ್ರಸಕ್ತ ವರ್ಷದಿಂದ ಮೊಹರೆ ಹನುಮಂತರಾವ್ ಅವರ ಹೆಸರಿನಲ್ಲಿ 1 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡ ರಾಜ್ಯಮಟ್ಟದ ಪ್ರಶಸ್ತಿ ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತರ ಹಾಗೂ ಸಂಕಷ್ಟದಲ್ಲಿರುವ ಪತ್ರಕರ್ತರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮ ರೂಪಿಸಿದೆ ಎಂದು ಅವರು ಹೇಳಿದರು.

ಪತ್ರಕರ್ತರಿಗೆ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಸಂಚರಿಸಲು ಸ್ಮಾರ್ಟ್‌ಕಾರ್ಡ್ ನೀಡುವ ವಿಚಾರ ಪರಿಶೀಲನೆಯಲ್ಲಿದೆ ಎಂದ ಅವರು ಪತ್ರಕರ್ತರು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸರ್ಕಾರವನ್ನು ಹೆಚ್ಚು ಅವಲಂಬಿಸುವಂತಾಗಬಾರದು ಎಂದು ಕಿವಿಮಾತು ಹೇಳಿದರು. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ. ಸ್ವತಂತ್ರವಾಗಿ, ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಬೇಕು ಎಂದು ಅವರು ಹೇಳಿದರು. ಜಾಹಿರಾತು ನೀತಿ ಹಾಗೂ ಸಿನಿಮಾ ನೀತಿ, ಕರಡು ಸಿದ್ದವಾಗಿದ್ದು ಸದ್ಯವೇ ಅಂತಿಮಗೊಳಿಸಲಾಗುವುದು ಎಂದರು.

ಟಿ.ಎನ್.ಸತ್ಯನ್ ಹೆಸರಿನಲ್ಲಿ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸ್ಥಾಪಿಸಲಾಗಿರುವ ಪ್ರಶಸ್ತಿಯನ್ನು ಹಿಂದೂ ಪತ್ರಿಕೆಯ ಛಾಯಾಗ್ರಾಹಕ ಶ್ರೀರಾಂ ಹಾಗೂ ಕನ್ನಡಪ್ರಭ ಪತ್ರಿಕೆ ವರದಿಗಾರ ಮಹೇಶ್ ಭಗೀರಥ ಅವರಿಗೆ ಪ್ರಧಾನ ಮಾಡಲಾಯಿತು. ಅಭಿವೃದ್ಧಿಶೀಲ ರಾಷ್ಟ್ರದಲ್ಲಿ ಜನಹಿತ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರ ಜವಾಬ್ದಾರಿ ಹೆಚ್ಚು ಇದೆ ಎಂದು ಶಾಸಕ ಶ್ರೀನಿವಾಸಪ್ರಸಾದ್ ಅಭಿಪ್ರಾಯಪಟ್ಟರು. ಸಂಸದ ವಿಶ್ವನಾಥ್, ಆಂದೋಲನ ಪತ್ರಿಕೆ ಸಂಪಾದಕ ರಾಜಶೇಖರಕೋಟಿ, ನಿವೃತ್ತ ಅರಣ್ಯಾಧಿಕಾರಿ ಜಯರಾಮ್, ಸಿದ್ದಾರ್ಥ ಹೋಟೆಲ್ ಮಾಲೀಕ ಶ್ರೀ ಗಿರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮೈಸೂರುಮಿತ್ರ ಪತ್ರಿಕೆ ಸಂಪಾದಕ ಕೆ.ಬಿ.ಗಣಪತಿ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X