ಡೀಮ್ಡ್ ವಿವಿಗಳಿಗೆ ರಾಜ್ಯ ಸರಕಾರದ ಅಭಯಹಸ್ತ

ಯುಜಿಸಿ ನಿಯಮಾವಳಿ ಪ್ರಕಾರ ಮೂಲಸೌಕರ್ಯ ಹೊಂದಿರದ ಕರ್ನಾಟಕದ 6 ವಿಶ್ವವಿದ್ಯಾಲಯ ಮತ್ತು ವಿವಿಧ ರಾಜ್ಯಗಳಲ್ಲಿನ 38 ವಿಶ್ವವಿದ್ಯಾಲಯಗಳನ್ನು ಅಮಾನ್ಯ ಮಾಡುವ ಕುರಿತು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಕಪಿಲ್ ಸಿಬಲ್ ಹೇಳಿಕೆ ನೀಡಿರುವುದು ಸಂಘರ್ಷಕ್ಕೆ ದಾರಿಮಾಡಿಕೊಟ್ಟಿದೆ. ಅಮಾನ್ಯ ಮಾಡುವ ಕುರಿತು ಕಪಿಲ್ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು, ಡೀಮ್ಡ್ ವಿವಿಗಳು ರಾಜ್ಯ ವಿಶ್ವವಿದ್ಯಾಲಯದಲ್ಲಿ ಸೇರಿಕೊಳ್ಳಬಹುದು ಅಥವಾ ಖಾಸಗಿ ವಿಶ್ವವಿದ್ಯಾಲಯವಾಗಿ ಮುಂದುವರಿಯಬಹುದು ಎಂದು ಹೇಳಿ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಆಶಾಭಾವನೆ ಮೂಡಿಸಿದ್ದಾರೆ. ಬೆಂಗಳೂರಿನಲ್ಲಿರುವ ಕ್ರೈಸ್ಟ್ ವಿಶ್ವವಿದ್ಯಾಲಯ ಮತ್ತು ಜೈನ್ ವಿಶ್ವವಿದ್ಯಾಲಯಗಳನ್ನು ಅಮಾನ್ಯ ಮಾಡುವುದಾಗಿ ಸಿಬಲ್ ಹೇಳಿದ್ದಾರೆ.
ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಲಿಂಬಾವಳಿ, ಎರಡೂ ವಿಶ್ವವಿದ್ಯಾಲಯಗಳು ಉತ್ತಮ ಮೂಲಸೌಕರ್ಯ ಹೊಂದಿವೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯೇ ಸಮಸ್ಯೆಗಳಿಂದ ಬಳಲುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.
ಡೀಮ್ಡ್ ವಿವಿಗಳು ಮೂಲ ಸೌಕರ್ಯಗಳಿಂದ ಬಳಲುತ್ತಿರಬಹುದು ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯದಿರುವಾಗಲೇ ಅಮಾನ್ಯ ಮಾಡುವ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ ಎಂಬ ಅಭಿಪ್ರಾಯವನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications