ಪ್ರೇಮಿಗಳಿಗೆ ಮತ್ತೆ ಮುತಾಲಿಕ್ ಭಯ

ವಿದೇಶಿ ಸಂಸ್ಕೃತಿಯನ್ನು ನಮ್ಮ ಮೇಲೆ ಹೇರುವ ಕೆಟ್ಟ ಪರಂಪರೆಯನ್ನು ಬಲವಾಗಿ ವಿರೋಧಿಸುವುದಾಗಿ ಹೇಳಿರುವ ಮುತಾಲಿಕ್, ಪ್ರೇಮಿಗಳ ದಿನಾಚರಣೆಗೆ ಅವಕಾಶ ನೀಡಬಾರದು ಎಂದು ಕೋರಿ ಕಾಲೇಜು, ಹೋಟೆಲ್, ಪಬ್‌ಗಳಿಗೆ ಮನವಿ ಪತ್ರವನ್ನು ನೀಡಲು ನಿರ್ಧರಿಸಿರುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದರು.
ಅಲ್ಲದೇ, ಪ್ರೇಮಿಗಳ ದಿನವನ್ನು ಆಚರಿಸದಂತೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು. ಒಂದು ವೇಳೆ ಶಾಲಾ-ಕಾಲೇಜು, ಹೊಟೇಲ್‌ಗಳಲ್ಲಿ ನಮ್ಮ ಮನವಿಯನ್ನು ಧಿಕ್ಕರಿಸಿ ಪ್ರೇಮಿಗಳ ದಿನಾಚರಣೆಗೆ ಅವಕಾಶ ಮಾಡಿಕೊಟ್ಟಲ್ಲಿ ಶ್ರೀರಾಮಸೇನೆ ಅದಕ್ಕೆ ಅಡ್ಡಿಪಡಿಸುವುದಾಗಿ ಎಚ್ಚರಿಕೆಯನ್ನೂ ಈ ಸಂದರ್ಭದಲ್ಲಿ ನೀಡಿದರು.
ಕಳೆದ ವರ್ಷ ಪ್ರೇಮಿಗಳ ದಿನಾಚರಣೆ ವಿರುದ್ಧ ಎಚ್ಚರಿಕೆ ನೀಡಿದ್ದ ಮುತಾಲಿಕ್‌ಗೆ ಪಿಂಕ್ ಚಡ್ಡಿ ಕಳುಹಿಸುವಂತೆ ಪತ್ರಕರ್ತೆ ಸುಸಾನ್ ಕರೆ ನೀಡಿದ್ದು, ಅದರಂತೆ ಫೆ.14ರಂದು ಹುಬ್ಬಳ್ಳಿಯಲ್ಲಿರುವ ಮುತಾಲಿಕ್ ಕಚೇರಿ ತುಂಬಾ ಪಿಂಕ್ ಚಡ್ಡಿಗಳಿಂದಲೇ ತುಂಬಿ ಹೋಗಿತ್ತು.











Click it and Unblock the Notifications