ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಳಗಾವಿ ಮಹಾರಾಷ್ಟ್ರದಲ್ಲಿ, ಉಪರಾಷ್ಟ್ರಪತಿ ಕಚೇರಿ

By Mahesh
|
Google Oneindia Kannada News

Prof Nallur Prasad
ಬೆಂಗಳೂರು ಫೆ 1 : ಅವಕಾಶ ಸಿಕ್ಕಾಗಲೆಲ್ಲಾ ರಾಜ್ಯದ ಕೆಲವೊಂದು ಪ್ರದೇಶಗಳ ಮೇಲೆ ಹಕ್ಕು ಪ್ರತಿಪಾದಿಸುತ್ತಲೇ ಬರುತ್ತಿರುವ ಮಹಾರಾಷ್ಟ್ರಕ್ಕೆ ಕೇಂದ್ರದಿಂದ ಮೌನ ಬೆಂಬಲ ಸಿಕ್ಕಿದೆ. ಕನ್ನಡಿಗರ 'ಗಂಡುಮೆಟ್ಟಿನನೆಲ' ಎಂದೇ ಕರೆಸಿಕೊಳ್ಳುವ ಬೆಳಗಾವಿ ಜಿಲ್ಲೆ ಮಹಾರಾಷ್ಟ್ರ ರಾಜ್ಯದಲ್ಲಿದೆ ಎಂದು ಉಪರಾಷ್ಟ್ರಪತಿ ಸಚಿವಾಲಯ ಪತ್ರ ವ್ಯವಹಾರ ನಡೆಸುವ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸಕ್ಕೆ ಕೈಹಾಕಿದೆ.

ಜನವರಿ 11 ರಂದು ಉಪರಾಷ್ಟ್ರಪತಿಗಳ ಸಚಿವಾಲಯದ ಅಧೀನ ಕಾರ್ಯದರ್ಶಿ ಮಹಿತಾಬ್ ಸಿಂಗ್ ಬೆಳಗಾವಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಅವರಿಗೆ ಪ್ರತ್ಯೇಕ ಪತ್ರ ಬರೆದು ಅದರಲ್ಲಿ ಜಿಲ್ಲಾಧಿಕಾರಿ/ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ, ಬೆಳಗಾವಿ ಜಿಲ್ಲೆ, ಮಹಾರಾಷ್ಟ್ರ ಎಂದು ವಿಳಾಸವನ್ನು ನಿರ್ದೇಶಿಸಿದ್ದಾರೆ.

ಉಪರಾಷ್ಟ್ರಪತಿ ಸಚಿವಾಲಯದ ಈ ನಡುವಳಿಕೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದು, ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿವೆ. ಉಪರಾಷ್ಟ್ರಪತಿ ಕಾರ್ಯಾಲಯದಲ್ಲಿ ಈ ತಪ್ಪಿಗೆ ಕಾರಣರಾದ ಅಧಿಕಾರಿಯನ್ನು ತಕ್ಷಣ ಪತ್ತೆ ಹಚ್ಚಿ ಕ್ರಮ ಜರುಗಿಸಬೇಕುಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X