• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತಿರುಪತಿ ರೈಲು ಚಾ.ನಗರಕ್ಕೂ ಬರಲಿದೆ!

By Mahesh
|

ಮೈಸೂರು ಫೆ 3 : ಈ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ತಿರುಪತಿ - ಮೈಸೂರು ಫಾಸ್ಟ್ ಪ್ಯಾಸೆಂಜರ್ ರೈಲನ್ನು ಚಾಮರಾಜನಗರ ನಗರದ ವರೆಗೆ ವಿಸ್ತರಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಈ ರೈಲು ಸಂಚಾರ ನಾಳೆ (ಫೆ 4 ) ರಿಂದ ಆರಂಭವಾಗುತ್ತಿದೆ. ಕಳೆದ ಬಜೆಟ್ ನಲ್ಲಿ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಚಾಮರಾಜನಗರದ ವರೆಗೆ ವಿಸ್ತರಿಸುವ ಘೋಷಣೆ ಮಾಡಿದ್ದರು.

ಚಾಮರಾಜನಗರ >> ನಂಜನಗೂಡು>> ಮೈಸೂರು>> ಬೆಂಗಳೂರು ಮಾರ್ಗವಾಗಿ ತಿರುಪತಿಗೆ ತೆರಳುವ ರೈಲಿಗೆ, ರೈಲ್ವೆ ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಾಳೆ ಮಧ್ಯಾಹ್ನ 3ಗಂಟೆಗೆ ಹಸಿರು ನಿಶಾನೆ ತೋರಿಸಲಿದ್ದಾರೆಂದು ಚಾಮರಾಜನಗರ ಸಂಸದ ಧ್ರುವ ನಾರಾಯಣ್ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಮಧ್ಯಾಹ್ನ 1 .30 ಕ್ಕೆ ರೈಲ್ವೆ ನಿಲ್ದಾಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು ಧ್ರುವನಾರಾಯಣ, ಸಿದ್ದರಾಮಯ್ಯ ಮುಂತಾದವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇಜ್ಜತ್ ಮಾಸಿಕ ಪಾಸ್ ನ್ನು2500 ಮಂದಿಗೆ ವಿತರಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X