ದೇವರಾಯನ ದುರ್ಗದಲ್ಲಿ ಜಾತ್ರಾ ಮಹೋತ್ಸವ
ತುಮಕೂರು, ಫೆ. 8: ದೇವರಾಯನ ದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಫೆ.22 ರಿಂದ ಮಾರ್ಚ್ 6 ರವರೆಗೆ ನಡೆಯಲಿದೆ. ಮಾರ್ಚ್ 1ರಂದು ಸೋಮವಾರ ಮಧ್ಯಾಹ್ನ 1 ಗಂಟೆಗೆ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಜರುಗಲಿದೆ.
ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜನತೆಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ಜನರೇಟರ್ ಮೂಲಕ ವಿದ್ಯುತ್ ಸಂಪರ್ಕ,ಪೊಲೀಸ್ ಬಂದೋಬಸ್ತ್, ಸಮರ್ಪಕ ಸಾರಿಗೆ ವ್ಯವಸ್ಥೆ, ತುರ್ತು ಚಿಕಿತ್ಸಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಭಕ್ತಾದಿಗಳಿಗೆ ವಿಶೇಷ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದ್ದು, ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸುತ್ತಮುತ್ತಲ ಪ್ರದೇಶದ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಹಾಗೂ ಸಾಗಣೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬ್ರಹ್ಮ ರಥೋತ್ಸವದ ದಿನದಂದು ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸಂಯುಕ್ತಾಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.












Click it and Unblock the Notifications