ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಸ್ಲಿಮರಿಗೇಕೆ ವಿಶೇಷ ಕೋಟಾ?

By Rajendra
|
Google Oneindia Kannada News

Andhra Muslim quota law quashed again
ಹೈದರಾಬಾದ್, ಫೆ. 9 : ಮುಸ್ಲಿಮರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಲು ಹೋರಾಟ ನಡೆಸುತ್ತಿರುವ ಆಂಧ್ರಪ್ರದೇಶ ಸರಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರ 15 ಪಂಗಡಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 4 ರಷ್ಟು ಮೀಸಲು ನೀಡಬೇಕೆಂಬ ಆಂಧ್ರಪ್ರದೇಶ ಸರಕಾರದ ನಿರ್ಧಾರವನ್ನು ಆಂಧ್ರ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ರಮೇಶ್ ದವೆ ನೇತೃತ್ವದ ಏಳು ನ್ಯಾಯಮೂರ್ತಿಗಳ ಪೀಠ ಈ ತೀರ್ಪು ಪ್ರಕಟಿಸಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ಅಧಿಕಾರದಲ್ಲಿದ್ದಾಗ 2007ರಲ್ಲಿ ಮುಸ್ಲಿಮರಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ. 4 ರಷ್ಟು ಹಾಗೂ ಉದ್ಯೋಗಾವಕಾಶದಲ್ಲಿ ಮೀಸಲು ನೀಡಲು ಆದೇಶ ಹೊರಡಿಸಿತ್ತು. ಆ ಸಂದರ್ಭದಲ್ಲಿ ವಿವಿಧ ಕಡೆಯಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ನಲ್ಲಿ 2 ಬಾರಿ ಆದೇಶ ತಿರಸ್ಕೃತವಾಗಿತ್ತು. ಆಂಧ್ರ ಮುಸ್ಲಿಂ ಮೀಸಲು ವಿರೋಧಿಸಿ ಕೆ ಕೊಂಡಲರಾವ್ ಎಂಬುವವರು ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X