ಫೆ.17 ರಿಂದ ವಾಹನ ಸಂಚಾರ ಗಣತಿ
ಬೆಂಗಳೂರು,
ಫೆ. 9 : ರಾಜ್ಯದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ 2010ನೇ ಸಾಲಿನ ಗಣತಿಯನ್ನು ಫೆಬ್ರವರಿ 17 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 24 ರ ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ ಏಳು ದಿನಗಳ ಕಾಲ ನಡೆಸಲಾಗುವುದು. id="toptextpromo">ಈ
ಗಣತಿಗೆ ಸುಮಾರು 3821 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ಗಣತಿಯಿಂದ ವಾಹನ ಸಂಚಾರದ ಬೆಳವಣಿಗೆ ತೀವ್ರತೆಯನ್ನು ಗಮನಿಸಿ ರಸ್ತೆಗಳ ಮೇಲ್ಮೈಯನ್ನು ಅಭಿವೃದ್ಧಿಪಡಿಸುವುದು, ರಸ್ತೆಗಳನ್ನು ಅಗಲಪಡಿಸುವುದು ಹಾಗು ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಇದೇ ಮೊದಲಾದ ಹಲವಾರು ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರ್ಕಾರವು ರೂಪಿಸಲು ಮತ್ತು ಕೈಗೆತ್ತಿಗೊಳ್ಳಲು ಅನುಕೂಲವಾಗುವುದು. id='are-slot-1' class='oiad oi-axt oiadv'> id='top-searched-articles'>ವಾಹನ
ಸಂಚಾರ ವಿವರಗಳನ್ನು ಸಂಗ್ರಹಿಸಲು ರಾಜ್ಯದಲ್ಲಿನ 3821 ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಫೆಬ್ರವರಿ 17 ರಿಂದ 24 ರವರೆಗೆ ನಡೆಸಲಾಗುವ ಈ ವಾಹನ ಸಂಚಾರದ ಗಣತಿಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಇಲಾಖೆಯ ಪ್ರಕಟಣೆಯಲ್ಲಿ ಕೋರಲಾಗಿದೆ.











Click it and Unblock the Notifications