ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.17 ರಿಂದ ವಾಹನ ಸಂಚಾರ ಗಣತಿ

By Mrutyunjaya Kalmat
|
Google Oneindia Kannada News

Vehicle Census in State highway
ಬೆಂಗಳೂರು, ಫೆ. 9 : ರಾಜ್ಯದ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ 2010ನೇ ಸಾಲಿನ ಗಣತಿಯನ್ನು ಫೆಬ್ರವರಿ 17 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 24 ರ ಬೆಳಿಗ್ಗೆ 6 ಗಂಟೆಯವರೆಗೆ ಸತತವಾಗಿ ಏಳು ದಿನಗಳ ಕಾಲ ನಡೆಸಲಾಗುವುದು.

ಈ ಗಣತಿಗೆ ಸುಮಾರು 3821 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ಗಣತಿಯಿಂದ ವಾಹನ ಸಂಚಾರದ ಬೆಳವಣಿಗೆ ತೀವ್ರತೆಯನ್ನು ಗಮನಿಸಿ ರಸ್ತೆಗಳ ಮೇಲ್ಮೈಯನ್ನು ಅಭಿವೃದ್ಧಿಪಡಿಸುವುದು, ರಸ್ತೆಗಳನ್ನು ಅಗಲಪಡಿಸುವುದು ಹಾಗು ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಇದೇ ಮೊದಲಾದ ಹಲವಾರು ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರ್ಕಾರವು ರೂಪಿಸಲು ಮತ್ತು ಕೈಗೆತ್ತಿಗೊಳ್ಳಲು ಅನುಕೂಲವಾಗುವುದು.

ವಾಹನ ಸಂಚಾರ ವಿವರಗಳನ್ನು ಸಂಗ್ರಹಿಸಲು ರಾಜ್ಯದಲ್ಲಿನ 3821 ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಫೆಬ್ರವರಿ 17 ರಿಂದ 24 ರವರೆಗೆ ನಡೆಸಲಾಗುವ ಈ ವಾಹನ ಸಂಚಾರದ ಗಣತಿಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಇಲಾಖೆಯ ಪ್ರಕಟಣೆಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X