ಕೆ ಎಚ್ ಪಾಟೀಲ್ ಪ್ರತಿಮೆಗೆ ಚಪ್ಪಲಿಹಾರ?

ಗದಗ ಮತ್ತು ಹುಲಕೋಟಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ಆರಂಭಿಸಿದ್ದು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಗುರುವಾರ ಸಂಜೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದಿದ್ದಕ್ಕೆ ಪ್ರತಿಯಾಗಿ ಸೇನೆ ಕಾರ್ಯಕರ್ತರು ಕೆ ಎಚ್ ಪಾಟೀಲ್ ಅವರ ಪ್ರತಿಮೆಗೆ ಚಪ್ಪಲಿಹಾರ ಹಾಕಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಕೂಡಲೇ ಸೇನೆ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಆರಂಭವಾಗಿದ್ದು, ಹೆಚ್ಚಿನ ಬಿಗಿ ಭದ್ರತೆ ನಿಯೋಜಿಸಲಾಗಿದೆ.












Click it and Unblock the Notifications