ಪ್ರೇಮಿಗಳ ದಿನಕ್ಕೆ ವ್ಯಾಪಕ ಬಿಗಿ ಭದ್ರತೆ

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಗೃಹ ಸಚಿವ ವಿ ಎಸ್ ಆಚಾರ್ಯ, ಪ್ರೇಮಿಗಳ ದಿನವನ್ನು ಶಾಂತಿಯುತವಾಗಿ ಆಚರಿಸಲು ಬೇಕಾದ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಲಾಗಿದೆ.
ಅಲ್ಲದೇ ಗುರುವಾರ ಸಂಜೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಕ್ ಅವರ ಮುಖಕ್ಕೆ ಮಸಿ ಪ್ರಕರಣವನ್ನು ಖಂಡಿಸಿದರು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣಕ್ರಮ ಜರುಗಿಸಲಾಗುವುದು ಸಹ ಆಚಾರ್ಯ ಎಚ್ಚರಿಕೆ ನೀಡಿದರು. ಮಸಿ ಬಳಿದಿರುವ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರದ ಬಗ್ಗೆ ಮಾತನಾಡದ ಆಚಾರ್ಯ, ಕಾಂಗ್ರೆಸ್ ನಾಯಕರು ಇಂತಹ ಘಟನೆಗಳು ನಡೆಯದಂತೆ ಕಾರ್ಯಕರ್ತರಿಗೆ ಸೂಚನೆ ನೀಡಬೇಕು. ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯಾದ್ಯಂತ ಪ್ರತಿಭಟನೆ
ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದಿರುವ ಪ್ರಕರಣಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ಪ್ರತಿಭಟನೆಗಳು, ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಘಟನೆ ಖಂಡಿಸಿ ಶ್ರೀರಾಮಸೇನೆ ಕಾರ್ಯಕರ್ತರು ಧಾರವಾಡ, ಬೆಳಗಾವಿ, ಮಂಗಳೂರು, ಗುಲ್ಬರ್ಗಾ, ಸಿಂದಗಿ, ಆನೇಕಲ್, ಮೈಸೂರು, ಶಿವಮೊಗ್ಗಗಳಲ್ಲಿ ಪ್ರತಿಭಟನೆ ನಡೆಯತೊಡಗಿವೆ. ಮುಂಜಾಗ್ರತಾ ಕ್ರಮವಾಗಿ ಧಾರವಾಡ ಮತ್ತು ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಗದಗನಲ್ಲಿ ಮೂರು ದಿನ ನಿಷೇಧಾಜ್ಞೆ
ಸಹಕಾರಿ ರಂಗದ ಭೀಷ್ಮ ಎಂದೇ ಖ್ಯಾತರಾಗಿರುವ ಕಾಂಗ್ರೆಸ್ ಹಿರಿಯ ಧುರೀಣ ಕೆ ಎಚ್ ಪಾಟೀಲ್ ಅವರ ಪ್ರತಿಮೆಗೆ ಚಪ್ಪಲಿಹಾರ ಹಾಕಿರುವ ಘಟನೆಯಿಂದ ಗದಗನಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಪ್ರತಿಭಟನಾಕಾರರ ಆಕ್ರೋಶಕ್ಕೆ ಆರು ಬಸ್ ಗಳು ಭಸ್ಮವಾಗಿವೆ. ಉತ್ತರ ವಲಯದ ಡಿಜಿಪಿ ಶಿವಕುಮಾರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.












Click it and Unblock the Notifications