ಕೆಲ ಬಾಬ್ತುಗಳಿಗೆ ತೆರಿಗೆ ಹೆಚ್ಚಳ ಅನಿವಾರ್ಯ

ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಮುಂಗಡ ಪತ್ರವನ್ನು ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಮಂಡಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ಸತತ ಒಂದು ತಿಂಗಳಿಂದ ಭರದ ಸಿದ್ದತೆ ನಡೆದಿದೆ ಎಂದರು.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಶ್ರೀಮಂತರ ಮೇಲೆ ಹೆಚ್ಚುವರಿ ತೆರಿಗೆ ಹೇರುವ ಬಗ್ಗೆಯೂ ಸುಳಿವು ನೀಡಿದ್ದಾರೆ. ಉಳ್ಳವರಿಗೆ ಹೆಚ್ಚುವರಿ ತೆರಿಗೆ ಹೇರಲು ಚಿಂತನೆ ನಡೆಸಲಾಗಿದೆ. ದುಡ್ಡಿರುವವರು ಸರಕಾರಕ್ಕೆ ಹೆಚ್ಚುವರಿ ಹಣವನ್ನು ಪಾವತಿಸುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ವಿದ್ಯುತ್ ಆಭಾವ ಹೆಚ್ಚಾಗಿದ್ದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ವಿದ್ಯುತ್ ಒದಗಿಸಲು ಸರಕಾರ ಚಿಂತನೆ ನಡೆಸಿದೆ. ವಿದ್ಯುತ್ ಕೊರತೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಲು ಅವಕಾಶ ನೀಡುವುದಿಲ್ಲ ಎಂದರು. ಕೈಗಾರಿಕೆಗಳಿಗೆ ಭೂಸ್ವಾಧೀನಪಡಿಸಿಕೊಳ್ಳುವ ಸಂಬಂಧ ರಾಷ್ಟ್ರೀಯ ನೀತಿ ರೂಪಿಸುವುದು ಅಗತ್ಯವಾಗಿದೆ ಎಂದು ಹೇಳಿದ ಯಡಿಯೂರಪ್ಪ, ಕೇಂದ್ರದ ಮಾರ್ಗಸೂಚಿ ಪ್ರಕಾರ ರಾಜ್ಯಗಳು ಭೂಸ್ವಾಧೀನ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದರು. ಬಜೆಟ್ ನಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.












Click it and Unblock the Notifications