ಪುಣೆ ಸ್ಫೋಟ: ಆರ್ ಡಿಎಕ್ಸ್ ಬಳಕೆ
ಪುಣೆ,
ಫೆ. 16 : ಶನಿವಾರ ರಾತ್ರಿ ಇಲ್ಲಿನ ಜರ್ಮನ್ ಬೇಕರಿ ಬಳಿ ನಡೆದ ಬಾಂಬ್ ಸ್ಫೋಟಕ್ಕೆ ಅಮೋನಿಯಂ ನೈಟ್ರೆಟ್, ಆರ್ ಡಿ ಎಕ್ಸ್ ಮತ್ತು ಹೈಡ್ರೋ ಕಾರ್ಬನ್ ಆಯಿಲ್ ಬಳಸಲಾಗಿತ್ತು. ಘಟನೆಯಲ್ಲಿ ಒಟ್ಟು 10 ಮಂದಿ ಮೃತಪಟ್ಟಿದ್ದು, ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಮಹಾರಾಷ್ಟ್ರ ಸರಕಾರ ಹೇಳಿದೆ. id="toptextpromo">ಈ
ಕುರಿತು ಮಾಧ್ಯಮಗೋಷ್ಠಿ ನಡೆಸಿದ ಪುಣೆ ಪೊಲೀಸ್ ಆಯುಕ್ತ ಸತ್ಯಪಾಲ್ ಸಿಂಗ್, ಪುಣೆಯ ಜರ್ಮನ್ ಬೇಕರಿ ಸ್ಫೋಟ ಅತ್ಯಂತ ವ್ಯವಸ್ಥೆ ಸಂಚು. ಈ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ. ಘಟನೆಗೆ ಅಮೋನಿಯಂ ನೈಟ್ರೇಟ್, ಆರ್ ಡಿ ಎಕ್ಸ್ ಮತ್ತು ಹೈಡ್ರೋಕಾರ್ಬನ್ ಆಯಿಲ್ ಬಳಿಸಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ. ಆದರೆ, ಸ್ಫೋಟವನ್ನು ರಿಮೋಟ್ ಕಂಟ್ರೋಲ್ ಮೂಲಕ ನಡೆಸಲಾಗಿದೆ ಎಂಬುದನ್ನು ಅವರು ನಿರಾಕರಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಈ
ಮಧ್ಯೆ, ಕೇಂದ್ರ ಗೃಹ ಕಾರ್ಯದರ್ಶಿ ಪಿ ಕೆ ಪಿಳ್ಳೈ, ಪುಣೆ ಸ್ಫೋಟದಲ್ಲಿ ವಿದೇಶಿ ಶಕ್ತಿಗಳ ಕೈವಾಡವಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತನಿಖೆ ಚುರುಕುಗೊಂಡಿದೆ. ತನಿಖೆ ಪೂರ್ಣಗೊಂಡ ನಂತರ ವಿವರಿಸುವುದಾಗಿ ಅವರು ಹೇಳಿದ್ದಾರೆ. ಕರಾಚಿ ಪ್ರೊಜೆಕ್ಟ್ ಎಂಬ ಹೆಸಿರನಲ್ಲಿ ಪಾಕ್ ಪ್ರಚೋದಿತ ಉಗ್ರರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಗಳು ಕೇಳಿಬರುತ್ತಿವೆ.











Click it and Unblock the Notifications