ಬಿಬಿಎಂಪಿ ಚುನಾವಣೆ ಕಾಲಾವಕಾಶ ಕೋರಿ ಅರ್ಜಿ
ಬೆಂಗಳೂರು,
ಫೆ. 16 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಗೆ ಆರು ತಿಂಗಳ ಕಾಲಾವಕಾಶ ಕೋರಿ ರಾಜ್ಯ ಸರಕಾರ ಸುಪ್ರಿಂಕೋರ್ಟ್ ವಿಶೇಷ ಮೇಲ್ಮನವಿ ಸಲ್ಲಿಸಿದೆ. id="toptextpromo">ಮಾರ್ಚ್
30ರೊಳಗೆ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸ್ಪಷ್ಟ ತಾಕೀತು ಮಾಡಿತ್ತು. ಆದರೆ, ರಾಜ್ಯ ಸರಕಾರ ಮಾರ್ಚ್ ತಿಂಗಳಲ್ಲಿ ವಿವಿಧ ತರಗತಿಗಳ ಪರೀಕ್ಷೆಗಳು ನಡೆಯಲಿವೆ. ಬಜೆಟ್ ನ ಪೂರ್ವ ತಯಾರಿಯನ್ನು ಮಾಡಿಕೊಳ್ಳಬೇಕಿದೆ ಹಾಗೂ ಅಧಿವೇಶನವನ್ನು ನಡೆಬೇಕಿರುವ ಕಾರಣ ಬಿಬಿಎಂಪಿ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡುವಂತೆ ಕೋರಿ ಸುಪ್ರಿಂಕೋರ್ಟ್ ಮೇಲ್ಮನವಿ ಸಲ್ಲಿಸಿದೆ. id='are-slot-1' class='oiad oi-axt oiadv'> id='top-searched-articles'>ಈ
ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಲಾವಕಾಶ ಕೋರಿ ಸುಪ್ರಿಂಕೋರ್ಟ್ ಗೆ ಸಲ್ಲಿಸಿದ ಅರ್ಜಿಯ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಮಾರ್ಚ್ ತಿಂಗಳು ಪರೀಕ್ಷಾ ಸಮಯವಾಗಿದೆ. ಈ ಸಮಯದಲ್ಲಿ ಚುನಾವಣೆಗಳನ್ನು ನಡೆಸುವುದು ಎಷ್ಟು ಸೂಕ್ತ. ಈ ಎರಡರಲ್ಲಿ ಯಾವುದನ್ನಾದರೂ ಒಂದನ್ನು ಮುಂದೂಡಲೇಬೇಕಿತ್ತು. ಹೀಗಾಗಿ ಚುನಾವಣೆಗಳನ್ನು ಮುಂದೂಡುವುದು ಸರಿ ಎನ್ನಿಸಿದ್ದರಿಂದ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದು ವಿವರಿಸಿದರು.











Click it and Unblock the Notifications