ಬೆಂಗಳೂರು, ಫೆ. 18 : ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಂಜುಳಾ ನಾಯ್ಡು ನೇಮಕಗೊಂಡಿದ್ದಾರೆ. ಕಾಲೇಜು ವಿದ್ಯಾರ್ಥಿನಿಯಾಗಿದ್ದಾಗಲೇ ಕಾಂಗ್ರೆಸ್ ಪಾದಾರ್ಪಣೆ ಮಾಡಿದ ಇವರು ಕೆಪಿಸಿಸಿ ಬೆಂಗಳೂರು ನಗರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದಾರೆ.
1990ರಲ್ಲಿ ಬೆಂಗಳೂರು ಮಹಾನಗರಪಾಲಿಕೆ ಸದಸ್ಯರಾಗಿದ್ದ ಮಂಜುಳಾ ನಾಯ್ಡು 1992 ರಿಂದ 1993ರ ವರೆಗೆ ಉಪ ಮೇಯರ್ ಆಗಿಯೂ ಕೆಲಸ ನಿರ್ವಹಿಸಿದ್ದರು. ಕಳೆದ ನಾಲ್ಕು ವರ್ಷದಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ.