ಪಾಕ್ ನಲ್ಲಿ 42 ಉಗ್ರ ಸಂಘಟನೆಗಳಿವೆ, ಎಂಟನಿ
ಪಣಜಿ,
ಫೆ. 19 : ಭಾರತ ಮತ್ತು ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಆರಂಭಗೊಳ್ಳುವ ಮುನ್ನವೇ ಪಾಕಿಸ್ತಾನದಲ್ಲಿ 42 ಭಯೋತ್ಪಾದನಾ ಸಂಘಟನೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಹೇಳಿದ್ದಾರೆ. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು ಪಾಕಿಸ್ತಾನದಲ್ಲಿ ಭಯೋತ್ಪಾದನಾ ಸಂಘಟನೆಗಳು ಕಾರ್ಯನಿರ್ವಹಿಸುತ್ತಿರುವ ಸಂಗತಿ ಹೊಸದೇನಲಲ್ಲ. ಈ ಕಾರಣಕ್ಕಾಗಿ ಅನೇಕ ಭಯೋತ್ಪಾದಕರು ಭಾರತದೊಳಗೆ ನುಸುಳುತ್ತಿದ್ದಾರೆ. ಆದ್ದರಿಂದ ನಮ್ಮ ಮಾತುಕತೆಯೇಮಿದ್ದರೂ ಭಯೋತ್ಪಾದನೆ ಹತ್ತಿಕ್ಕುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ ಎಂದು ಎಂಟನಿ ಸ್ಪಷ್ಟಪಡಿಸಿದರು. id='are-slot-1' class='oiad oi-axt oiadv'> id='top-searched-articles'>ಮುಂಬರುವ
ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆಯಲ್ಲಿ ಭಯೋತ್ಪಾದನೆಯೇ ಏಕೈಕ ಪ್ರಮುಖ ಸಂಗತಿ. ಭಯೋತ್ಪಾದನೆ ನಿಗ್ರಹಕ್ಕೆ ಪಾಕಿಸ್ತಾನ ಸರಕಾರ ಧೈರ್ಯದಿಂದ ಕೆಲಸ ಮಾಡಬೇಕಿದೆ. ಮೊದಲು ಆ ದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆಗಳನ್ನು ಮಟ್ಟಹಾಕಬೇಕಿದೆ ಎಂದು ಎಂಟನಿ ಅಭಿಪ್ರಾಯಪಟ್ಟರು.











Click it and Unblock the Notifications