ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕ್ ನಲ್ಲಿ 42 ಉಗ್ರ ಸಂಘಟನೆಗಳಿವೆ, ಎಂಟನಿ

By Mrutyunjaya Kalmat
|
Google Oneindia Kannada News

AK Antony
ಪಣಜಿ, ಫೆ. 19 : ಭಾರತ ಮತ್ತು ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ಆರಂಭಗೊಳ್ಳುವ ಮುನ್ನವೇ ಪಾಕಿಸ್ತಾನದಲ್ಲಿ 42 ಭಯೋತ್ಪಾದನಾ ಸಂಘಟನೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು ಪಾಕಿಸ್ತಾನದಲ್ಲಿ ಭಯೋತ್ಪಾದನಾ ಸಂಘಟನೆಗಳು ಕಾರ್ಯನಿರ್ವಹಿಸುತ್ತಿರುವ ಸಂಗತಿ ಹೊಸದೇನಲಲ್ಲ. ಈ ಕಾರಣಕ್ಕಾಗಿ ಅನೇಕ ಭಯೋತ್ಪಾದಕರು ಭಾರತದೊಳಗೆ ನುಸುಳುತ್ತಿದ್ದಾರೆ. ಆದ್ದರಿಂದ ನಮ್ಮ ಮಾತುಕತೆಯೇಮಿದ್ದರೂ ಭಯೋತ್ಪಾದನೆ ಹತ್ತಿಕ್ಕುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ ಎಂದು ಎಂಟನಿ ಸ್ಪಷ್ಟಪಡಿಸಿದರು.

ಮುಂಬರುವ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆಯಲ್ಲಿ ಭಯೋತ್ಪಾದನೆಯೇ ಏಕೈಕ ಪ್ರಮುಖ ಸಂಗತಿ. ಭಯೋತ್ಪಾದನೆ ನಿಗ್ರಹಕ್ಕೆ ಪಾಕಿಸ್ತಾನ ಸರಕಾರ ಧೈರ್ಯದಿಂದ ಕೆಲಸ ಮಾಡಬೇಕಿದೆ. ಮೊದಲು ಆ ದೇಶದಲ್ಲಿ ಸಕ್ರಿಯವಾಗಿರುವ ಉಗ್ರ ಸಂಘಟನೆಗಳನ್ನು ಮಟ್ಟಹಾಕಬೇಕಿದೆ ಎಂದು ಎಂಟನಿ ಅಭಿಪ್ರಾಯಪಟ್ಟರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X