ಆರು ಅರಣ್ಯಗಳಲ್ಲಿ ಗಣಿಗಾರಿಕೆಗೆ ಅನುಮತಿ
ಬೆಂಗಳೂರು,
ಫೆ. 21 : ಬಳ್ಳಾರಿ ಜಿಲ್ಲೆಯಲ್ಲಿ ನಾಲ್ಕು ಅರಣ್ಯ ಬ್ಲಾಕ್, ಶಿವಮೂಗ್ಗ ಮತ್ತು ಮೈಸೂರಿನಲ್ಲಿ ತಲಾ ಒಂದೊಂದು ರಕ್ಷಿತ ಅರಣ್ಯ ಬ್ಲಾಕ್ ಗಳಲ್ಲಿ ಗಣಿಗಾರಿಕೆಗೆ ಷರತ್ತುಬದ್ಧ ಅನುಮತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. id="toptextpromo"> ಗಣಿಗಾರಿಕೆಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಮೀಸಲೇತರ ರಕ್ಷಿತ ಅರಣ್ಯ ವ್ಯಾಪ್ತಿಗೆ ಸೇರಿದ ಈ ಪ್ರದೇಶವನ್ನು ಮತ್ತೆ ಮೀಸಲು ವ್ಯಾಪ್ತಿಗೆ ತರುವ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಶನಿವಾರ ಕೈಗೊಂಡಿದೆ. ತಾವು ಮುಖ್ಯಮಂತ್ರಿಯಾದ ಬಳಿಕ ಯಾವುದೇ ಹೊಸ ಗಣಿಗಾರಿಕೆಗೆ ಅವಕಾಶ ಕೊಟ್ಟಿಲ್ಲ. ಮುಂದೆಯೂ ಕೊಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಇದಕ್ಕೆ ವಿರುದ್ಧವಾಗಿ ರಾಜ್ಯ ಸರಕಾರ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿಸಲು ತೀರ್ಮಾನಿಸಿರುವುದು ಅಚ್ಚರಿ ಮೂಡಿಸಿದೆ. id='are-slot-1' class='oiad oi-axt oiadv'> id='top-searched-articles'> ಬಳ್ಳಾರಿಯಲ್ಲಿ ಕಬ್ಬಿಣ ಅದಿರು ಹಾಗೂ ಶಿವಮೂಗ್ಗ ಮತ್ತು ಮೈಸೂರಿನಲ್ಲಿ ಮ್ಯಾಂಗನೀಸ್ ಅದಿರು ಗಣಿಗಾರಿಕೆಗೆ ಷರತ್ತುಬದ್ಧ ಅವಕಾಶ ನೀಡಲು ನಿರ್ಧರಿಸಲಾಗಿದೆ. ಗಣಿಗಾರಿಕೆಗೆ ಕೋರಿ ಸಾಕಷ್ಟು ಅರ್ಜಿಗಳು ಬಂದಿವೆ.











Click it and Unblock the Notifications