ಕೋಲಾರ, ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಒತ್ತಾಯ

ಮುಂಬರುವ ರಾಜ್ಯ ಬಜೆಟ್‌ನಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಪ್ರಕಟಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು. ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿ ತಾಲ್ಲೂಕುಗಳಿಗೆ 10 ಕೋಟಿ ರುಪಾಯಿಯಂತೆ ಹಣವನ್ನು ಮೇಲ್ಕಂಡ ಉದ್ದೇಶಕ್ಕಾಗಿ ಮೀಸಲಿಡಲು ಕೋರಿಕೆ ಸಲ್ಲಿಸಿದರು.
ಇತ್ತೀಚೆಗೆ ಕೆ ಹೆಚ್.ಮುನಿಯಪ್ಪನವರು ಕರೆದಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕುಸಿದಿರುವ ಅಂತರ್ಜಲ ಮಟ್ಟವನ್ನು ಸುಧಾರಿಸುವ ಕುರಿತು ಹಾಗೂ ಜಿಲ್ಲೆಯಲ್ಲಿ ಕೈಗೊಳ್ಳ ಬೇಕಾದ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಕುರಿತು ಚರ್ಚಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತಾ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಪ್ರಥಮ ಆಧ್ಯತೆಯ ಮೇರೆಗೆ ನೀಡಲು ಸಹ ಸೂಚಿಸಿದರು.
ಮುಖ್ಯಮಂತ್ರಿ ಸಹ ಮುನಿಯಪ್ಪ ಅವರ ಬಳಿಯಲ್ಲಿ ಹಲವು ರೈಲ್ವೆ ಕಾರ್ಯಕ್ರಮಗಳ ಬಗ್ಗೆಯು ಸಹ ಚರ್ಚಿಸಿದ್ದು, ಮುಂಬರುವ ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ವಿಶೇಷವಾದ ಅನುದಾನವನ್ನು ನೀಡಲು ಪ್ರಸ್ಥಾಪಿಸಿದರು. ಮುನಿಯಪ್ಪ ಪ್ರತ್ಯೇಕ ಯೋಜನೆಯನ್ನು ಸಿದ್ದಪಡಿಸಿರುವುದಾಗಿ ತಿಳಿಸಿದ್ದು, ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯ ಆಗುವುದಿಲ್ಲವೆಂದು ಭರವಸೆ ನೀಡಿದರು.











Click it and Unblock the Notifications