ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಳೆ ಎರ್ಪೋರ್ಟ್ ರಸ್ತೆಯಲ್ಲಿ ಭಾರೀ ಅಗ್ನಿ ದುರಂತ

By Mrutyunjaya Kalmat
|
Google Oneindia Kannada News

Fire accident in Carlton tower, Bangalore
ಬೆಂಗಳೂರು, ಫೆ. 23 : ನಗರದ ಎಚ್ಎಎಲ್ ಎರ್ಪೋರ್ಟ್ ಸಮೀಪದಲ್ಲಿರುವ ಡೈಮಂಡ್ ಡಿಸ್ಟ್ರಿಕ್ಟ್ ಕಾರ್ಲಟನ್ ಬಹುಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ದೊರೆಕಿದೆ.

ಮಣಿಪಾಲ್ ಆಸ್ಪತ್ರೆಯ ಬಳಿಯಿರುವ ಸುಮಾರು 6 ಎಕರೆ ಪ್ರದೇಶದಲ್ಲಿರುವ ಕಾರ್ಲಟನ್ ಕಟ್ಟಡದಲ್ಲಿ ಸುಮಾರು 45 ವಿವಿಧ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಮೊದಲು ಮೂರನೇ ಮಹಡಿಯಲ್ಲಿ ಬೆಂಕಿ ಆಕಸ್ಮಿಕ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದಲ್ಲಿ ತನ್ನ ಕೆನ್ನಾಲಿಗೆ ವ್ಯಾಪಿಸಿದೆ.

ಮೂರನೇ ಮಹಡಿ ಮೇಲಿರುವ ಸಿಕ್ಕಿ ಹಾಕಿಕೊಂಡಿರುವ ಜನ ಕಟ್ಟಡದಿಂದ ಕೆಳಕ್ಕೆ ಜಿಗಿಯುವ ಪ್ರಯತ್ನ ಮಾಡಿದ್ದಾರೆ. ಜಿಗಿದವರಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಪ್ರಾಣ ಉಳಿಸಿಕೊಳ್ಳಲು ಮೇಲಿನಿಂದ ಧುಮುಕಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಕೆಲವರು ಉಸಿರುಗಟ್ಟಿ ಸತ್ತಿದ್ದಾರೆ ಎಂದು ತಿಳಿದುಬಂದಿದೆ. ಸಾವಿನ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಆದರೆ, ಕಟ್ಟಡ ಮೇಲಿಂದ ಜಿಗಿಯಬೇಡಿ ಎಂದು ಪೊಲೀಸರು, ಅಗ್ನಿಶಾಮಕದಳ ಜನರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಕಟ್ಟಡದಲ್ಲಿ ಕೆಲ ಜನ ಇನ್ನೂ ಸಿಲುಕಿಕೊಂಡಿದ್ದಾರೆ.

ಬೆಂಕಿ ನಂದಿಸಲು ಅಗ್ನಿ ಶಾಮಕದಳ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಕಟ್ಟಡದ ಲಿಫ್ಟ್ ಗಳಿಗೆ ಬೆಂಕಿ ಆವರಿಸಿಕೊಂಡಿದ್ದರಿಂದ ಸ್ಥಗಿತಗೊಂಡಿವೆ. ಎಚ್ಎಎಲ್ ರಸ್ತೆಯಲ್ಲಿ ಭಾರಿ ಜನಜಂಗುಳಿ ಸೇರಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಕಟ್ಟಡದ ಕಿಡಿಕಿಗಳನ್ನು ಒಡೆದು ಒಳಕ್ಕೆ ನುಗ್ಗಿ ಬೆಂಕಿ ನಂದಿಸಲು ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X