ಮಹಿಳಾ ಎಸ್ಐ ಗುಂಡು ಹಾರಿಸಿಕೊಂಡು ಅತ್ಮಹತ್ಯೆ
ಬೆಂಗಳೂರು,
ಫೆ. 23 : ಆನೇಕಲ್ ಪೊಲೀಸ್ ಠಾಣೆ ಕ್ರೈಂ ಬ್ರಾಂಚ್ ವಿಭಾಗದ ಮಹಿಳಾ ಸಬ್ ಇನ್ಸ್ ಪೆಕ್ಟರ್ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ಸಬ್ ಇನ್ಸ್ ಪೆಕ್ಟರ್ ತಂದೆ ಮಾತ್ರ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. id="toptextpromo">ಸುಷ್ಮಾ
ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಸಬ್ ಇನ್ಸ್ ಪೆಕ್ಟರ್. 2007ರಲ್ಲಿ ಪೊಲೀಸ್ ಸೇವೆ ಸೇರಿದ್ದ ಸುಷ್ಮಾ, ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಆನೇಕಲ್ ಪೊಲೀಸ್ ಠಾಣೆಗೆ ನಿಯೋಜಿನೆಗೊಂಡ ಅವರು, ಕ್ರೈಂ ಬ್ರ್ಯಾಂಚ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಕಡಿಮೆ ಅವಧಿಯಲ್ಲಿ ಉತ್ತಮ ಅಧಿಕಾರಿ ಎಂಬ ಹೆಸರು ಗಳಿಸಿದ್ದ ಸುಷ್ಮಾ, ಅನೇಕಲ್ ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದರು. ಸೋಮವಾರ ಸಂಜೆ ಯಥಾ ಪ್ರಕಾರ ಕೆಲಸ ಮುಗಿಸಿ ಮನೆಗೆ ತೆರಳಿದ ಅವರು, ಸೇವೆಗೆ ನೀಡಿದ್ದ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಪತ್ರವನ್ನು ಅವರು ಬರೆದಿಟ್ಟಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಆದರೆ,
ಕೆಎಸ್ ಆರ್ ಪಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ನಿವೃತ್ತಿ ಹೊಂದಿರುವ ಸುಷ್ಮಾತಂದೆ ಇದು ಆತ್ಮಹತ್ಯೆಯಲ್ಲ, ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ತನಿಖೆ ಆರಂಭಗೊಂಡಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.











Click it and Unblock the Notifications