ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.28 ಎಂಪಿ ಪ್ರಕಾಶ್ ಅಭಿನಂದನಾ ಕಾರ್ಯಕ್ರಮ

By Mrutyunjaya Kalmat
|
Google Oneindia Kannada News

MP Prakash
ಬೆಂಗಳೂರು, ಫೆ. 25 : ರಾಜಕೀಯ ಮಾತ್ರವಲ್ಲದೇ ಹೋರಾಟ, ರಂಗಭೂಮಿ, ಸಾಹಿತ್ಯ ಮತ್ತಿತರ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಬಹುಮುಖ ವ್ಯಕ್ತಿತ್ವದ ಮಾಜಿ ಉಪಮುಖ್ಯಮಂತ್ರಿ ಎಂಪಿ ಪ್ರಕಾಶ್ ಅವರನ್ನು ಮಹಾತ್ಮ ಗಾಂಧಿ ಶಾಂತಿ ಸೌಹಾರ್ದ ವೇದಿಕೆ ಫೆ. 28 ರಂದು ಆರ್ ಟಿ ನಗರದ ತರಳುಬಾಳು ಕೇಂದ್ರದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ರಾಜ್ಯಪಾಲ ಹಂಸ್ ರಾಜ್ ಭಾರದ್ವಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅಧ್ಯಕ್ಷತೆ ವಹಿಸುವರು. ಮಾಜಿ ಪ್ರಧಾನಿ ದೇವೇಗೌಡ ಅಭಿನಂದನಾ ಕೃತಿ ಬಿಡುಗಡೆ ಮಾಡಲಿದ್ದಾರೆ. ಸಿ ಕೆ ಜಾಫರ್ ಷರೀಫ್, ವಿ ಶ್ರೀನಿವಾಸ್ ಪ್ರಸಾದ್, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಮೋಟಮ್ಮ, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ ಕೆ ಶಿವಕಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ವೇದಿಕೆಯ ಅಧ್ಯಕ್ಷ ರವಿಶಂಕರ್ ತಿಳಿಸಿದ್ದಾರೆ.

ಸಮಾಜವಾದಿ ಸಿದ್ಧಾಂತದ ಮೂಲಕ ಹಿನ್ನೆಲೆಯಲ್ಲಿ ರಾಜಕೀಯ ಜೀವನ ಆರಂಭಿಸಿದ ಎಂಪಿ ಪ್ರಕಾಶ್ ಅವರು 1983ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿ ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದರು. ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X