ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆಗೆ ಮನವಿ
ಬೆಂಗಳೂರು,
ಫೆ.25 : ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಹುಟ್ಟೂರು ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಕೇಂದ್ರ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ಹೇಳಿದರು. id="toptextpromo">ವಿಶ್ವೇಶ್ವರಯ್ಯ
ತಾಂತ್ರಿಕ ವಿಶ್ವವಿದ್ಯಾಲಯ ಮುದ್ದೇನಹಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಅಭಿವೃದ್ಧಿ ತಾಂತ್ರಿಕ ಮಹಾವಿದ್ಯಾಲಯ ಉದ್ಘಾಟನೆ ಹಾಗೂ ಸಂಸ್ಥೆಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 11 ನೇ ಪಂಚವಾರ್ಷಿಕ ಯೋಜನೆಯಲ್ಲಿ ಮುದ್ದೇನಹಳ್ಳಿಯಲ್ಲಿ ಐಐಟಿ ಸ್ಥಾಪನೆ ಸೇರ್ಪಡೆಯಾಗುವ ವಿಶ್ವಾಸವಿದೆ ಎಂದರು. id='are-slot-1' class='oiad oi-axt oiadv'> id='top-searched-articles'>ಸರ್
ಎಂ ವಿಶ್ವೇಶ್ವರಯ್ಯ ಅವರ 150 ನೇ ಹುಟ್ಟುಹಬ್ಬ ಅಂಗವಾಗಿ ಸೆಪ್ಟೆಂಬರ್ 15 ರಂದು ಪ್ರಧಾನಿ ಮನಮೋಹನ್ ಸಿಂಗ್ ಅವರು ಆಗಮಿಸಲಿದ್ದು, ಅಂದು ಐಐಟಿ ಸ್ಥಾಪನೆ ಸಂಬಂಧ ಘೋಷಣೆ ಮಾಡುವಂತೆ ಕೋರಲಾಗುವುದು ಮೊಯ್ಲಿ ಹೇಳಿದರು.











Click it and Unblock the Notifications