ಮಾ.8ರೊಳಗೆ ವೈದ್ಯಕೀಯ ಸೀಟು ಹಂಚಿಕೆ ತೀರ್ಮಾನ
ಬೆಂಗಳೂರು,
ಮಾ.2: ವೈದ್ಯಕೀಯ ಕೋರ್ಸ್ ಗಳ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾ.8ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರ ಗೌಡ ತಿಳಿಸಿದ್ದಾರೆ. ಸಿಇಟಿ 2008ಕ್ಕೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. id="toptextpromo">ಸರಕಾರ
ಮತ್ತು ಖಾಸಗಿ ಮಂಡಳಿಗೆ ಕ್ರಮವಾಗಿ ಶೇ.45:55 ಅನುಪಾತದಲ್ಲಿ ವೈದ್ಯಕೀಯ ಸೀಟುಗಳು ಹಂಚಿಕೆಯಾಗಲಿರುವ ನಿರೀಕ್ಷೆಯಿದೆ. ಈ ಸಂಬಂಧ ಒಮ್ಮತದ ಸೂತ್ರಕ್ಕಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಯುತ್ತಿದೆ. id='are-slot-1' class='oiad oi-axt oiadv'> id='top-searched-articles'>ವೈದ್ಯಕೀಯ
ಶಿಕ್ಷಣ ಶುಲ್ಕಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ನಿರ್ಧಾರಕ್ಕೆ ಬರಲು ಸಮಿತಿ ರಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರು ತಿಳಿಸಿದರು. ಈಗಾಗಲೇ ಸರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕ ನಿಗದಿಗೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾರಾಯಣ್ ಏಕ ಸದಸ್ಯ ಸಮಿತಿಯನ್ನು ರಚಿಸಿದೆ.











Click it and Unblock the Notifications