ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾ.3ರಿಂದಲೇ ಬಸ್ ದರ ತುಟ್ಟಿ ?

By Mrutyunjaya Kalmat
|
Google Oneindia Kannada News

BMTC, KSRTC bus fare hike likely
ಬೆಂಗಳೂರು, ಮಾ. 3 : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದ ರಾಜ್ಯ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ದರವನ್ನು ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗುವಂತೆ ಹೆಚ್ಚಿಸಲು ಸರಕಾರ ನಿರ್ಧರಿಸಿದ್ದು, ಶೇ. 6ರಿಂದ 8ರಷ್ಟು ಏರಿಕೆ ಅನಿವಾರ್ಯವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.

ಕೇಂದ್ರ ಸರಕಾರ ತೈಲ ಬೆಲೆ ಹೆಚ್ಚಿಸಿರುವುದರಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಪ್ರತಿದಿನ ಐವತ್ತು ಲಕ್ಷ ರುಪಾಯಿ ನಷ್ಟ ಅನುಭವಿಸುತ್ತಿದೆ. ಈ ಹಿನ್ನಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ. ಇಂದು ರಾತ್ರಿ ಹತ್ತು ಗಂಟೆಯವರೆಗೆ ಕಾದು ನೋಡಿ, ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸದಿದ್ದರೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಬಸ್ ಪ್ರಯಾಣ ತುಟ್ಟಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಏರಿಸಿದ್ದೆ ತಡ ಯುಪಿಎ ಅಂಗಪಕ್ಷಗಳಾದ ಡಿಎಂಕೆ, ತೃಣಮೂಲ ಕಾಂಗ್ರೆಸ್ ಮಾತ್ರ ತೈಲ ಬೆಲೆ ಏರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದರಿಂದಾಗಿ ಕಾಂಗ್ರೆಸ್ ಪಕ್ಷ ಮಂಗಳವಾರ ರಾತ್ರಿ ಅಂಗಪಕ್ಷಗಳ ಮಹತ್ವದ ಸಭೆ ಕರೆದಿತ್ತು. ಅದರೆ, ಈ ಸಭೆಯಲ್ಲಿ ತೈಲ ದರ ಇಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಆದರೆ, ಡಿಎಂಕೆ, ತೃಣಮೂಲ ಕಾಂಗ್ರೆಸ್ ಪಕ್ಷಗಳು ಸರಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇವುಗಳ ಒತ್ತಡಕ್ಕೆ ಸರಕಾರ ಮಣಿಯುವ ಸಾಧ್ಯತೆ ಇದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X