ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್ 18 ರಿಂದ ಪಿಯುಸಿ ಪರೀಕ್ಷೆ, ಕಾಗೇರಿ

By Mrutyunjaya Kalmat
|
Google Oneindia Kannada News

Vishveshwara Hegde Kageri
ಬೆಂಗಳೂರು, ಮಾ. 3 : ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಈ ತಿಂಗಳು 18 ರಿಂದ ಆರಂಭವಾಗಲಿದ್ದು, ರಾಜ್ಯಾದ್ಯಂತ ಒಟ್ಟು 907 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6,51,771 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾರ್ಚ್ 18 ರಿಂದ ಮಾರ್ಚ್ 31ರ ವರೆಗೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ವಿದ್ಯಾರ್ಥಿಗಳ ಪರೀಕ್ಷೆ ಪ್ರವೇಶ ಪತ್ರಗಳಿಗೆ ರಾಜ್ಯಮಟ್ಟದ ಅಧಿಕಾರಿಗಳ ಸಹಿ ಮಾಡಿ ಕಳಿಸಿಕೊಡುವ ವ್ಯವಸ್ಥೆ ಬದಲಾಗಿ, ಈ ಬಾರಿ ಆಯಾ ಕಾಲೇಜುಗಳ ಪ್ರಾಂಶುಪಾಲರೇ ಪ್ರವೇಶ ಪತ್ರಿಗಳಿಗೆ ಸಹಿ ಹಾಕಲಿದ್ದಾರೆ. ಪ್ರವೇಶ ಪತ್ರ ಮತ್ತು ಅಭ್ಯರ್ಥಿ ಪಟ್ಟಿಯನ್ನು ಮುದ್ರಿಸಿ ಈಗಾಗಲೇ ಆಯಾ ಕಾಲೇಜಿಗೆ ಕಳುಹಿಸಿಕೊಡಲಾಗಿದೆ.

ಒಟ್ಟು 907 ಪರೀಕ್ಷಾ ಕೇಂದ್ರಗಳ ಪೈಕಿ 52 ಕೇಂದ್ರಗಳನ್ನು ಸೂಕ್ಷ್ಮ ಮತ್ತು 19 ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಏಪ್ರಿಲ್ 2 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಮೇ ತಿಂಗಳ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಫಲಿತಾಂಶ ಬರಲಿದೆ ಎಂದು ಕಾಗೇರಿ ವಿವರಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X