ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಮತ್ತೆ ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ

By Mrutyunjaya Kalmat
|
Google Oneindia Kannada News

Shivamogga Bus stand cirle
ಶಿವಮೊಗ್ಗ, ಮಾ. 3 : ಕೋಮಗಲಭೆಗೆ ತುತ್ತಾಗಿದ್ದ ಶಿವಮೊಗ್ಗ ಸಹಜಸ್ಥಿತಿಯತ್ತ ಬರಲಿದೆ ಎನ್ನುವಷ್ಟರಲ್ಲಿಯೇ ಇಂದು ಹಳೇಮಂಡಿ ಪೇಟೆಯಲ್ಲಿರುವ ಪ್ಲಾಸ್ಟಿಕ್ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನಗರದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಾಳೆ ಸಂಜೆವರೆಗೂ ಮುಂದುವರೆಸುವ ಸಾಧ್ಯತೆ ಇದೆ.

ಘಟನಾ ಸ್ಥಳಕ್ಕೆ ಇಂದು ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಈ ಘಟನೆ ಸಂಭವಿಸಿದೆ. ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಲೇಖನವೊಂದಕ್ಕೆ ಒಂದು ಕೋಮಿನವರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಗೋಲಿಬಾರ್ ನಡೆಸಲಾಗಿತ್ತು. ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ನಂತರ ಭಾರಿ ಬಿಗಿ ಬಂದೋಬಸ್ತ್ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿತ್ತು.

ವಿಡಿಯೋ: ಕನ್ನಡ ಪತ್ರಿಕೆಗೆ ಲೇಖನ ಬರೆದಿಲ್ಲ: ತಸ್ಲೀಮಾ

ಈ ಹಿನ್ನೆಲೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ನಾಳೆ ಬೆಳಗ್ಗೆ 6 ಗಂಟೆಗೆ ನಿಷೇಧಾಜ್ಞೆ ಮುಗಿಯುತ್ತಿತ್ತು. ಆನಂತರ ಉಭಯ ಸಮಾಜದ ಹಿರಿಯರ ಸಂಧಾನ ಸಭೆ ಕರೆಯಲು ಚಿಂತನೆ ನಡೆಸಲಾಗಿತ್ತು. ಈ ಎಲ್ಲ ಬೆಳವಣಿಗೆ ಮಧ್ಯೆಯೇ ಮತ್ತೆ ಗಲಭೆ ಉದ್ಬವಿಸಿದ್ದು, ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕದಳ ಬೆಂಕಿ ನಂದಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X