ಲಾರಿ ಡಿಕ್ಕಿ : ವೈದ್ಯಕೀಯ ವಿದ್ಯಾರ್ಥಿ ಸಾವು

ಮೃತನು ಉಡುಪಿ ಮೂಲದ ಶ್ರೀರಾಜ್ (30). ಬಳ್ಳಾರಿಯ ತಾರಾನಾಥ ಆಯುರ್ವೇದ ವೈದ್ಯಕೀಯ ಕಾಲೇಜಿನ ವೈದ್ಯಕೀಯ ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿ. ಇವರ ಪೋಷಕರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅನಂತಪುರ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಕಾಲೇಜಿನತ್ತ ಹೋಗುತ್ತಿದ್ದಾಗ ಉಸುಕು (ಮರಳು) ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಕಾರಣ ಈ ದುರ್ಘಟನೆ ನಡೆದಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ : ತಾರಾನಾಥ ಆಯುರ್ವೇದ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ರಸ್ತೆ ಸಾರಿಗೆ ವ್ಯವಸ್ಥೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮತ್ತು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಳ್ಳಾರಿ - ಅನಂತಪುರ ರಸ್ತೆಯಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪರಿಸ್ಥಿತಿ ಬಿಗುವಿನಿಂದ ಕೂಡಿತ್ತು.












Click it and Unblock the Notifications