ಪತ್ರಿಕೆ ಮೇಲಿನ ದಾಳಿಗೆ ಅನಿವಾಸಿಗಳ ಖಂಡನೆ
ರಿಯಾದ್,
ಮಾ. 5 : ಮಂಗಳೂರಿನಲ್ಲಿ ಜಯಕಿರಣ ಮತ್ತು ಕನ್ನಡಪ್ರಭ ಪತ್ರಿಕಾ ಕಛೇರಿಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ. id="toptextpromo">ಕನ್ನಡಪ್ರಭ
ಪತ್ರಿಕೆಯಲ್ಲಿ ಪ್ರಕಟವಾದ ಬುರ್ಖಾ ಮತ್ತು ಮುಸ್ಲಿಂ ಸಮಾಜವನ್ನು ಅವಹೇಳಿಸುವ ಲೇಖನದ ವಿರುದ್ಧ ಆರೋಗ್ಯಪೂರ್ಣ ಚರ್ಚೆ ನಡೆಸಿ ಪರಿಹಾರ ಕಂಡು ಕೊಳ್ಳುವ ಬದಲು ಕಾನೂನನ್ನು ಕೈಗೆತ್ತಿ ಪ್ರತಿಭಟಿಸುವುದು ಸರಿಯಲ್ಲ ಎಂದು ಹೇಳಿದೆ. id='are-slot-1' class='oiad oi-axt oiadv'> id='top-searched-articles'>ಈ
ಲೇಖನದ ಬಗ್ಗೆ ಈಗಾಗಲೇ ಕನ್ನಡಪ್ರಭ ಪತ್ರಿಕೆಯ ಸಂಪಾದಕರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಹೀಗಿದ್ದೂ ಶಾಂತಿಯನ್ನು ಕೆಡಿಸುವ ಉದ್ದೇಶದಿಂದ ಮತ್ತೆ ಈ ದಾಳಿ ನಡೆದಿದೆ. ಈ ಬಗ್ಗೆ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಪತ್ರಕರ್ತರಿಗೆ ಹಾಗೂ ಪತ್ರಿಕಾ ಕಚೇರಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅನಿವಾಸಿ ಕನ್ನಡಿಗ ಪತ್ರಕರ್ತರ ಸಂಘದ ಸಂಚಾಲಕ ಅಶ್ರಫ್ ಮಂಜ್ರಾಬಾದ್ ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.











Click it and Unblock the Notifications