ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಸಹಾಯವಾಣಿ

By Rajendra
|
Google Oneindia Kannada News

Helpline for PU students
ಬೆಂಗಳೂರು, ಮಾ.7: ವಿದ್ಯಾರ್ಥಿಗಳ ಜೀವನದಲ್ಲಿ ದ್ವಿತೀಯ ಪಿಯುಸಿ ಪ್ರಮುಖ ಘಟ್ಟ. ಭವಿಷ್ಯಕ್ಕೆ ಹೊಸ ತಿರುವು ನೀಡುವ ಪ್ರಮುಖ ಪರೀಕ್ಷೆ. ಪರೀಕ್ಶೆಗಳು ಹತ್ತಿರವಾಗುತ್ತಿದ್ದಂತೆ ಪರೀಕ್ಷೆಯ ಒತ್ತಡ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಾಗುವುದು ಸಾಮಾನ್ಯ. ಅಂತಹ ವಿದ್ಯಾರ್ಥಿಗಳು ಇನ್ನು ಮುಂದೆ ಭಯಪಡುವ ಅಗತ್ಯವಿಲ್ಲ. ತಮ್ಮ ಸಮಸ್ಯೆ, ತೊಂದರೆಯನ್ನು ಸಹಾಯವಾಣಿ ಮೂಲಕ ಬಗೆಹರಿಸಿಕೊಳ್ಳಬಹುದು.

ಪರೀಕ್ಷೆಯ ಒತ್ತಡದಿಂದ ಬಳಲುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿಯನ್ನು ಸೋಮವಾರ(ಮಾ.8) ಆರಂಭಿಸಲಾಗುತ್ತದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸಹಾಯವಾಣಿ ಸೌಲಭ್ಯವನ್ನು ಉದ್ಘಾಟಿಸಲಿದ್ದಾರೆ.

ಭಾನುವಾರ ಮತ್ತು ರಜಾ ದಿನಗಳನ್ನು ಹೊರತುಪಡಿಸಿ ಮಾರ್ಚ್ 15ರವರೆಗೂ ಪ್ರತಿನಿತ್ಯ ಎರಡು ಗಂಟೆಗಳ ಕಾಲ ಸಹಾಯವಾಣಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಪಿಯುಸಿ ಶಿಕ್ಷಣ ಇಲಾಖೆಯ ಅಧಿಕಾರಗಳ ಜೊತೆಗೆ ಸಮಾಜಶಾಸ್ತ್ರಜ್ಞರು, ಮನೋರೋಗ ಚಿಕಿತ್ಸಕರು, ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ನೆರವಾಗಲಿದ್ದಾರೆ. ಸಹಾಯವಾಣಿ ಸಂಖ್ಯೆಗಳು: 2336 6778 ಮತ್ತು 2336 6779.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X